ಸಂಜೋತ ಭಂಡಾರಿ ನಿರ್ದೇಶನದ ʻಲಂಗೋಟಿ ಮ್ಯಾನ್ʼ ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರ ತಂಡದ ವಿರುದ್ಧ ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಆಕ್ರೋಶ ಹೊರಹಾಕಿದ್ದಾರೆ.
ಈ ರೀತಿ ಒಂದು ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಅವರು ಹೇಳಿದ್ದಾರೆ. ಚಿತ್ರವನ್ನು ಬ್ಯಾನ್ ಮಾಡದಿದ್ದರೆ, ಎಲ್ಲಾ ಚಿತ್ರ ಮಂದಿರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಲಂಗೋಟಿ, ಜನಿವಾರ ಇವು ಸನಾತನ ಸಂಸ್ಕೃತಿಯ ಪ್ರತೀಕ. ಇದು ಅಪಹಾಸ್ಯ ಮಾಡುವ ವಿಚಾರವಲ್ಲ. ಇತ್ತೀಚೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಎಲ್ಲರ ಶ್ರೇಯೋಭಿವೃದ್ಧಿಗೆ ಪೂಜೆ ಮಾಡಿದ್ದಾರೆ. ಇಂದು ನಮ್ಮನ್ನೇ ಅಪಹಾಸ್ಯ ಮಾಡುತ್ತಿದ್ದಾರೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.