
ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವೂ ಕರ್ನಾಟಕ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿವಮೊಗ್ಗ ವಿನಾಯಕ ನಗರದಲ್ಲಿ ಇರುವ ಲತಾ ಕಶ್ಯಪ್ರವರಿಗೆ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಲತಾ ಕಶ್ಯಪ್ರವರು ಸಾಂಸ್ಕೃತಿಕ ಚಟುವಟಿಕೆ, ನಿರಂತರವಾಗಿ ಕಠಿಣ ಪರಿಶ್ರಮದಿಂದ ಸಮಾಜ ಸೇವೆಯನ್ನು ಗುರುತಿಸಿ ಈ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿ ಕಲಾಕುಂಚದ ಸರ್ವ ಸದಸ್ಯರು, ಪದಾಧಿಕಾರಿಗಳು ಇವರಿಗೆ ಅಭಿಮಾನದಿಂದ ಅಭಿನಂದಿಸಿ ಶುಭ ಹಾರೈಸಿದ್ದಾರೆ.
