ಏ.4 ರಂದು ಅಲಂಕಾರಿನ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ‘ಪಂಚ ಕೃತಿಗಳ ಲೋಕಾರ್ಪಣಾ ಸಮಾರಂಭ’

0
30

ಅಲಂಕಾರು : ಕಡಬ ತಾಲೂಕಿನ ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಮತ್ತು ಭಾವಾಂಕುರ ಕನ್ನಡ ಸಂಘದ ಸಂಯುಕ್ತ ಆಶ್ರಯದಲ್ಲಿ ಸಾರಸ್ವತ ಲೋಕದ ಅಪೂರ್ವ ಕಾರ್ಯಕ್ರಮವಾದ ‘ಪಂಚ ಕೃತಿಗಳ ಲೋಕಾರ್ಪಣಾ ಸಮಾರಂಭ’ ಇದೇ ಬರುವ ಏಪ್ರಿಲ್ 4, 2026 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಪೂರ್ವಾಹ್ನ 10:00 ಗಂಟೆಗೆ ಹಿರಿಯ ಸಾಹಿತಿಗಳು ಹಾಗೂ ನಿವೃತ್ತ ಉಪನ್ಯಾಸಕರಾದ ಪ್ರೊ. ವಿ. ಬಿ. ಅರ್ತಿಕಜೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಕೃತಿ ವಿಮರ್ಶೆ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆ ಅವರು ವಹಿಸಲಿದ್ದಾರೆ.

ಕು. ಲಕ್ಷ್ಮಿ ಲೇಖನರವರ ಶ್ರೀಲೇಖ, ಕು. ಪಲ್ಲವಿ ಕೆ ಯವರ ತಿರುವು, ಕು. ಲಿಖಿತಾರವರ ಕನಸುಗಳ ಹಾರಾಟ,ಕು. ದೀಪಿಕಾರವರ ಮನದಾಳದ ರಸಮಂಜರಿ, ಕು. ಇಂಚರ ರವರ ಹನಿ ಹೆಜ್ಜೆ ಎಂಬ ಪಂಚ ಕೃತಿ ಲೋಕಾರ್ಪಣೆಯ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಅಧ್ಯಕ್ಷರಾದ ಸೇಸಪ್ಪ ರೈ, ಪುತ್ತೂರು ತಾಲೂಕು ಕ.ಸಾ.ಪ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ನಾರಾಯಣ ಕುಂಬ್ರ ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಮತ್ತು ಸಾಹಿತಿಯಾದ ಜ್ಯೋತಿ ಶೈಲೇಶ್ ಅವರು ಭಾಗವಹಿಸಿ ಕೃತಿಗಳ ಕುರಿತು ಮಾತನಾಡಲಿದ್ದಾರೆ.

ಕನ್ನಡ ನಾಡು, ನುಡಿ ಮತ್ತು ಸಾಹಿತ್ಯದ ಅಭ್ಯುದಯಕ್ಕಾಗಿ ರಾಜ್ಯದಲ್ಲಿಯೇ ಗಮನ ಸೆಳೆಯುವ ವಿಶೇಷ ವಿನೂತನ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಲೇಜಿನ ಪ್ರಾಂಶುಪಾಲರು, ಪ್ರೌಢಶಾಲಾ ಮುಖ್ಯಗುರುಗಳು, ಅಧ್ಯಾಪಕ ವೃಂದ ಹಾಗೂ ಭಾವಾಂಕುರ ಕನ್ನಡ ಸಂಘದ ಪದಾಧಿಕಾರಿಗಳು ಈ ಮೂಲಕ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


LEAVE A REPLY

Please enter your comment!
Please enter your name here