ಕಂಬಳಕ್ಕೆ ಸರ್ಕಾರದ ಪ್ರೋತ್ಸಾಹ ಅಗತ್ಯ: ಯು.ಟಿ.ಖಾದರ್
ಬಂಟ್ವಾಳ: ಅವಿಭಜಿತ ಜಿಲ್ಲೆಯ ಗ್ರಾಮೀಣ ಕೃಷಿಕರು ನಡೆಸುತ್ತಿದ್ದ ಕಂಬಳ ಕೂಟವು ಪ್ರಸಕ್ತ ಆಧುನಿಕತೆ ಸ್ಪರ್ಶದೊಂದಿಗೆ ಬೆಂಗಳೂರಿನಂತಹ ನಗರ ಪ್ರದೇಶಗಳಿಗೂ ವಿಸ್ತರಿಸಿದೆ. ಈ ಸಾಂಪ್ರದಾಯಿಕ ಮತ್ತು ಶಿಸ್ತುಬದ್ಧ ಜಾನಪದ ಕ್ರೀಡೆಗೆ ಸರ್ಕಾರದ ಕೂಡಾ ತಲಾ ರೂ 5ಲಕ್ಷ ಮೊತ್ತದ ನೆರವು ನೀಡುತ್ತಿದ್ದು, ಈ ಹಿಂದೆ ಕಂಬಳ ನಿಷೇಧ ಸಮಸ್ಯೆ ಎದುರಾದಾಗ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಸಿದ ಹೋರಾಟ ಯಶಸ್ವಿಯಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಇಲ್ಲಿನ ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಶನಿವಾರ ಆರಂಭಗೊಂಡ 14 ನೇ ವರ್ಷದ ಹೊನಲು ಬೆಳಕಿನ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳದಲ್ಲಿ ಪಾಲ್ಗೊಂಡು ಅಬವರು ಮಾತನಾಡಿದರು. ಅಳದಂಗಡಿ ಅರಮನೆ ತಿಮ್ಮಣ್ಣರಸ ಡಾ. ಪದ್ಮಪ್ರಸಾದ ಅಜಿಲ ಮತ್ತು ಅಲ್ಲಿಪಾದೆ ಸಂತ ಅಂತೋನಿ ಚರ್ಚ್ ಧರ್ಮಗುರು ರಾಬಟ್ ಡಿಸೋಜ ಕಂಬಳ ಕೂಟ ಉದ್ಘಾಟಿಸಿ ಶುಭ ಹಾರೈಸಿದರು. ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ತುಳುನಾಡಿನ ಕಂಬಳ ಕೂಟಕ್ಕೆ ಮೂಡೂರು-ಪಡೂರು ಕಂಬಳ ಸಮಿತಿ ಹೊಸ ರೂಪ ನೀಡಿದೆ’ ಎಂದರು.
ನವೀಕರಿಸಬಹುದಾದ ಇಂಧನ ನಿಗಮ ಅಧ್ಯಕ್ಷ ಟಿ.ಡಿ.ರಾಜೇಗೌಡ, ಧರ್ಮಗುರು ಮಾಸ್ಟರ್ ಅರುಣ್ ಡಿಸೋಜ, ದೃಶ್ಯ ಮಾಧ್ಯಮ ವ್ಯವಸ್ಥಾಪಕ ನಿದರ್ಶಕ ಲೀಲಾಕ್ಷ ಕರ್ಕೇರ, ಹೆದ್ದಾರಿ ಇಲಾಖೆ ಎಂಜಿನಿಯರ್ ಶಿವಪ್ರಸಾದ್ ಅಜಿಲ, ಅರ್ಚಕ ಹರಿಪ್ರಸಾದ್ ಬಳ್ಳುಲಾಯ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್ ಆರ್.ಕೆ, ಕಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಧರಣೇಂದ್ರ ಕುಮಾರ್, ಬೂಡ ಅಧ್ಯಕ್ಷ ಬೇಬಿ ಕುಂದರ್, ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೋ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ., ಕಂಬಳ ಸಮಿತಿ ಸಂಚಾಲಕ ಬಿ.ಪದ್ಮಶೇಖರ್ ಜೈನ್, ಕಾರ್ಯಧ್ಯಕ್ಷರು ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಧಾನ ಕಾರ್ಯಧ್ಯಕ್ಷರು ರಾಜೀವ ಶೆಟ್ಟಿ ಎಡ್ತೂರು, ಕೋಶಾಧಿಕಾರಿ ಪಿಲಿಫ್ ಫ್ರಾಂಕ್, ಉಪಾಧ್ಯಕ್ಷರಾದ ಕೆ.ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಅವಿಲ್ ಮಿನೇಜಸ್, ಸುದೀಪ್ಕುಮಾರ್ ಶೆಟ್ಟಿ, ಚಂದ್ರಶೇಖರ ಭಂಡಾರಿ, ಬಿ.ಆರ್.ಅಂಚನ್, ಕೆ.ಪದ್ಮನಾಭ ರೈ, ಸುದರ್ಶನ್ ಜೈನ್, ಅಬ್ಬಾಸ್ ಆಲಿ, ಉಮೇಶ ಕುಮಾಲ್ ನಾವೂರು, ರಾಜೇಶ್ ರಾಡ್ರಿಗಸ್, ಪ್ರವೀಣ್ ರಾಡ್ರಿಗಸ್, ಚಿತ್ತರಂಜನ್ ಶೆಟ್ಟಿ, ವೆಂಕಪ್ಪ ಪೂಜಾರಿ, ಡೆಂಜಿಲ್ ನೊರೋನ್ಹ ಮತ್ತಿತರರು ಇದ್ದರು. ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ಸ್ವಾಗತಿಸಿ, ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.