ಪರಿಸರ ಅಧ್ಯಯನ ಮತ್ತು ವಿಪತ್ತು ನಿರ್ವಹಣೆ ಪುಸ್ತಕ ಬಿಡುಗಡೆ

0
7

ಬೆಂಗಳೂರು : ಪರಿಸರ ಶಿಕ್ಷಣ ಮತ್ತು ವಿಪತ್ತು ನಿರ್ವಹಣೆಯ ಕುರಿತಾದ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರ ಐದನೇ ಕೃತಿ ‘ENVIRONMENT STUDIES & DISASTER MANAGEMENT’ (ಪರಿಸರ ಅಧ್ಯಯನ ಮತ್ತು ವಿಪತ್ತು ನಿರ್ವಹಣೆ) ಪುಸ್ತಕವನ್ನು ಕರ್ನಾಟಕ ಸರ್ಕಾರದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಗೌರವಾನ್ವಿತ ಶ್ರೀ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸಲು IAS, ಸದಸ್ಯ ಕಾರ್ಯದರ್ಶಿ ಗೋಕುಲ್ IAS, SEAC ಅಧ್ಯಕ್ಷರಾದ ಮಹೇಶ್ ಅರದವಳ್ಳಿ, SEAC ಸದಸ್ಯ ಕಾರ್ಯದರ್ಶಿ ರಮೇಶ್ ಬಿ.ವಿ. IAS, ನಿವೃತ್ತ ಹಿರಿಯ IAS ಅಧಿಕಾರಿಗಳು ಹಾಗೂ SEAC ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

AICTE ನಿಗದಿಪಡಿಸಿರುವ NEP-2020 ಮಾದರಿ ಪಠ್ಯಕ್ರಮಕ್ಕೆ ಅನುಗುಣವಾಗಿ ಪುಸ್ತಕವನ್ನು ರೂಪಿಸಲಾಗಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಹಾಗೂ ವಿಪತ್ತು ನಿರ್ವಹಣೆಯ ಕುರಿತು ಸಮಗ್ರ ಅರಿವು ಮೂಡಿಸುವ ಉದ್ದೇಶ ಹೊಂದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪುಸ್ತಕವನ್ನು ಉಚಿತವಾಗಿ ಲಭ್ಯವಾಗುವಂತೆ ಮಾಡಲಾಗುತ್ತಿದೆ.

ಪುಸ್ತಕ ಬಿಡುಗಡೆ ಮಾಡಿದ ಸಚಿವರಿಗೆ ಡಾ. ಮದ್ದೋಡಿ ಕೃತಜ್ಞತೆ ಸಲ್ಲಿಸಿದ್ದು, ಪರಿಸರ ಶಿಕ್ಷಣದ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ತಮ್ಮ ಕೊಡುಗೆಯನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.