ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼಮಾನಸಿಕ ಆರೋಗ್ಯಹಾಗೂ ಜೀವನ ಕೌಶಲ್ಯಗಳುʼ ಕುರಿತಾದ ಉಪನ್ಯಾಸ ಕಾರ್ಯಕ್ರಮ

0
17

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆರೋಗ್ಯ ಹಾಗೂ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ʼಮಾನಸಿಕ ಆರೋಗ್ಯಹಾಗೂ ಜೀವನ ಕೌಶಲ್ಯಗಳುʼವಿಷಯದ ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಯಿತು.

ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಸಂದೀಪ್ ಎಚ್.ಎಸ್, ಮಕ್ಕಳ ತಜ್ಞರು, ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳಿಗಾಗಿ ಅವಧಿಯನ್ನು ನಡೆಸಿಕೊಟ್ಟರು.

ನೇತಾಜಿ ಸಭಾಭವನದಲ್ಲಿ ವಿದ್ಯಾರ್ಥಿನಿಯರಿಗಾಗಿ ನಡೆದ ಅವಧಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ಅನನ್ಯಲಕ್ಷ್ಮೀ, ವೈದ್ಯರು, ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ದೈಹಿಕ ಆರೋಗ್ಯ ಹಾಗೂ ನೈರ್ಮಲ್ಯದ ಜೊತೆಗೆ ಮಾನಸಿಕ ಸ್ವಾಸ್ಥ್ಯದ ಅಗತ್ಯತೆಯನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಜೀವನದಲ್ಲಿ ಎದುರಾಗುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು, ನಿರ್ಧಾರ ತೆಗೆದುಕೊಳ್ಳುವಿಕೆ, ಸೃಜನಶೀಲ ಚಿಂತನೆ ಹಾಗೂ ವಿಮರ್ಶಾತ್ಮಕ ಚಿಂತನೆಗಳ ಮಹತ್ವವನ್ನು ವಿವಿಧ ಕಥೆ ಹಾಗೂ ಚಟುವಟಿಕೆಗಳ ಮೂಲಕ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ತಿಳಿಹೇಳಿದರು.

ಎರಡು ಪ್ರತ್ಯೇಕ ಅವಧಿಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯರಾದ ಚೈತ್ರ ಯು ಎನ್ ಹಾಗೂ ಪುಷ್ಪಲತಾ ಉಪಸ್ಥಿತರಿದ್ಧರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕಿಯರು, ಪ್ರಥಮ ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡರು. ಉಪನ್ಯಾಸಕಿಯರಾದ ಮಮತಾ ಶೆಟ್ಟಿ ಹಾಗೂ ದಯಾಮಣಿ ಟಿ .ಕೆ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here