ಪತ್ತೊಂಜಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಎಲ್ಇಡಿ ಟಿವಿ “ಹಸ್ತಾಂತರ

0
137

ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಹಾಗೂ ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ ಇದರ ವತಿಯಿಂದ ದಿನಾಂಕ 15-07-2025ರಂದು ಪತ್ತೊಂಜಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಎಲ್ಇಡಿ ಟಿವಿ “ಹಸ್ತಾಂತರಿಸುವ ಕಾರ್ಯಕ್ರಮ ದಾನಿಗಳ ನೆರವಿನಿಂದ ಅತ್ಯಂತ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಲಿಂಗೇಶ್ವರ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಪ್ರಸಾದ್ ದೇವಾಡಿಗ ಇವರು ವಹಿಸಿದ್ದರು.ವೇದಿಕೆಯಲ್ಲಿ ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೂಪಾ ಹರೀಶ್ ಶೆಟ್ಟಿ, ಯುವಕ ಮಂಡಲದ ಕಾರ್ಯದರ್ಶಿ ಶ್ರೀ ರಘುನಾಥ್ ಪೂಜಾರಿ ಮತ್ತು ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಮಮತಾ ಸುವರ್ಣ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಹರ್ಷಿಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯುವಕ ಮಂಡಲದ ಮತ್ತು ಮಹಿಳಾ ಮಂಡಲ ಪದಾಧಿಕಾರಿಗಳು ಸದಸ್ಯರು ಮತ್ತು ಯುವಕ ಮಂಡಲದ ಗೌರವ ಸಲಹೆಗಾರರು ಉಪಸ್ಥಿತರಿದ್ದರು.
ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು.

LEAVE A REPLY

Please enter your comment!
Please enter your name here