
ಮೂಡುಬಿದಿರೆ:ಆಳ್ವಾಸ್ ಪಿಯು ಕಾಲೇಜಿನ ಮಾದಕ ವ್ಯಸನ ಜಾಗೃತಿ ಸಮಿತಿಯಿಂದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕಾನೂನಿನ ಅರಿವು ಮತ್ತು ಜಾಗೃತಿ ಕಾರ್ಯಕ್ರಮ ವಿದ್ಯಾಗಿರಿಯ ವಿ.ಎಸ್ ಆಚಾರ್ಯ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆ ಆರಕ್ಷಕ ಠಾಣೆಯ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಮಾತಾನಾಡಿ, ಕಾಲೇಜಿನಲ್ಲಿ ಓದುವ ವಯಸ್ಸಿನಲ್ಲಿ ಕುತೂಹಲಕ್ಕಾಗಿ ಸಿಗರೇಟ್‌ನಿಂದ ಆರಂಭವಾಗುವ ಚಟಗಳು ನಿಧಾನವಾಗಿ ಮಾದಕವ್ಯಸನಗಳ ಜಾಲದಲ್ಲಿ ಬೀಳುವಂತೆ ಮಾಡುತ್ತದೆ. ಮೊದಲು ಗ್ರಾಹಕನಾಗಿರುವ ವ್ಯಕ್ತಿ ನಂತರ ಹಣದ ಆಸೆಯಿಂದ ಮಾದಕದ್ರವ್ಯಗಳ ವ್ಯಾಪಾರಕ್ಕೆ ಇಳಿಯುತ್ತಾನೆ. ಸಮಾಜದಲ್ಲಿ ಇಂತಹ ಕೃತ್ಯಕ್ಕೆ ವಿದ್ಯಾರ್ಥಿಗಳನ್ನೇ ಬಲೆ ಬೀಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಇಂತಹ ದುಶ್ಚಟಗಳಿಂದ ದೂರವಿರಬೇಕು. ಮಕ್ಕಳ ಇಂತಹ ಕೃತ್ಯದಿಂದ ತಂದೆ ತಾಯಂದಿರು ಅವಮಾನ ಎದುರಿಸುವಂತಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯಲ್ಲಿ ನಿರತರಾಗಿರುವುದು ಹಾಗೂ ಒಳ್ಳೆಯ ಗೆಳೆಯರ ಸ್ನೇಹ ಬೆಳೆಸುವುದು ಅಗತ್ಯ ಎಂದರು.
ಪೋಲೀಸ್ ಉಪನಿರೀಕ್ಷಕಿ ಪ್ರತಿಭಾ, ಕಾಲೇಜಿನ ಮುಖ್ಯ ಆಪ್ತ ಸಮಾಲೋಚಕಿ ರೇನಿಟಾ ಡಿಸೋಜ ಸಂಪನ್ಮೂಲ ವ್ಯಕ್ತಿಗಳಾಗಿದರು.
ಉಪ ಪ್ರಾಂಶುಪಾಲೆ ಝಾನ್ಸಿ ಪಿ. ಎನ್, ಕಲಾ ನಿಖಾಯದ ಡೀನ್ ವೇಣುಗೋಪಾಲ್ ಶೆಟ್ಟಿ, ಸಂಸ್ಥೆಯ ನಿಲಯ ಪಾಲಕರು ಹಾಗೂ ಕ್ಷೇಮಪಾಲಕರು ಉಪಸ್ಥಿತರಿದ್ದರು. ಉಪನ್ಯಾಸಕ ಶಿವಪ್ರಸಾದ ಬಿವಿ ನಿರೂಪಿಸಿದರು. ಅರುಣ್‌ಕುಮಾರ್ ಸ್ವಾಗತಿಸಿ, ಬಬಿತಾ ವಂದಿಸಿದರು.
ಆಳ್ವಾಸ್ ಪಿಯು ಕಾಲೇಜಿನಲ್ಲಿ ನಡೆದ ಕಾನೂನಿನ ಅರಿವು, ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳನ್ನು ಗೌರವಿಸಲಾಯಿತು.