ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

0
15

ಹಂಗಾರಕಟ್ಟೆ, : ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆಯಲ್ಲಿ ಆಗಸ್ಟ್ 5ರಂದು ರೋಟರಿ ಕ್ಲಬ್ ಹಂಗಾರಕಟ್ಟೆ–ಸಾಸ್ತಾನ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಶ್ರೀಮತಿ ಮುಕ್ತ ಬಾಯಿ ಹಾಗೂ ಪ್ರೊಬೆಷನರಿ ಪೊಲೀಸ್ ಉಪನಿರೀಕ್ಷಕಿ ಕು. ಆಶ್ರೀತಾ ಎ. ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಪೋಕ್ಸೋ (POCSO) ಕಾಯ್ದೆ, ಸೈಬರ್ ಅಪರಾಧಗಳು, ಮಕ್ಕಳ ಕಳ್ಳಸಾಗಣೆ, ಮಾದಕ ದ್ರವ್ಯ ವ್ಯಸನ ಹಾಗೂ ವಿವಿಧ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಕಾನೂನು ಅರಿವು ಮೂಡಿಸುವ ಜೊತೆಗೆ ಸುರಕ್ಷಿತ ಜೀವನದ ಬಗ್ಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮವನ್ನು ರೋಟರಿ ಕ್ಲಬ್ ಹಂಗಾರಕಟ್ಟೆ–ಸಾಸ್ತಾನದ ಅಧ್ಯಕ್ಷೆ ರೊ. ಕುಸುಮ ಮನೋಜ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.

ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಕಲ್ಪನಾ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ರೇಖಾ ಉಡುಪ (ಪೋಷಕ ಪ್ರತಿನಿಧಿ) ಹಾಗೂ ಡಿ.ಎಲ್.ಎಸ್.ಎ. ಪಿ.ಎಲ್.ವಿ. ಶ್ರೀ ರಕ್ಷಿತ್ ಕುಮಾರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರೊ. ಮನೋಜ್ ಕುಮಾರ್, ರೊ. ಅರವಿಂದ್ ಶರ್ಮಾ, ರೊ. ಲಕ್ಷ್ಮೀನಾರಾಯಣ, ರೊ. ಲೀಲಾವತಿ, ರೊ. ಸುಲತಾ ಹೆಗಡೆ, ರೊ. ಜ್ಯೋತಿ ಉದಯ್ ಕುಮಾರ್, ರೊ. ಅಮಿತಾ, ರೊ. ಮಮತಾ ಶೆಟ್ಟಿ, ಶಾಲಾ ವಿದ್ಯಾರ್ಥಿ ನಾಯಕಿ ಕು. ವರ್ಷ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಶ್ರೀ ಹರ್ಷವರ್ಧನ ಶೆಟ್ಟಿ ನಿರೂಪಿಸಿದರು.