ಬೆಳ್ತಂಗಡಿ: ತಾಲೂಕಿನ ಸವಣಾಲು ಸಮೀಪ ಚಿರತೆಯೊಂದು ಬೋನಿಗೆ ಬಿದ್ದಿದೆ. ಕಳೆದ ಎರಡು ತಿಂಗಳಿನಿಂದ ಈ ಭಾಗದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ತಿಳಿದುಬಂದಿದೆ.
ಸವಣಾಲು ಗ್ರಾಮದಲ್ಲಿ ಕಳೆದ 2 ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿಕೊಂಡಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಸಮೀಪ 2 ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇರಿಸಲಾಗಿತ್ತು. ಕಳೆದ ಮಧ್ಯರಾತ್ರಿ ಚಿರತೆ ಕೋಳಿಯನ್ನು ಹಿಡಿಯಲು ಬೋನಿನೊಳಗೆ ಹೋಗಿ ಸೆರೆಗೆ ಬಿದ್ದಿದೆ.
ಚಿರತೆ ಬೋನಿನೊಳಗೆ ಬಿದ್ದಿರುವ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ನು ಚಿರತೆ ಸೆರೆ ಸಿಕ್ಕಿರುವುದರಿಂದ ಸ್ಥಳೀಯರಲ್ಲಿ ಆತಂಕ ಸ್ಪಲ್ಪ ಕಡಿಮೆಯಾಗಿದೆ.