ಪಣಿಯೂರು ಜಂಕ್ಷನ್‌ನಲ್ಲಿ ಚಿರತೆ ಸಂಚಾರ? ವೈರಲ್ ಫೋಟೋದಿಂದ ಗ್ರಾಮಸ್ಥರಲ್ಲಿ ಭೀತಿ!

0
11

ಉಡುಪಿ : ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನವೊಂದರಿಂದ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ ಎನ್ನಲಾಗಿದ್ದು, ಭಾನುವಾರದಿಂದ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ ಚಿತ್ರದಲ್ಲಿರುವ ಪ್ರಾಣಿ ನಿಜವಾಗಿಯೂ ಚಿರತೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ವೈರಲ್ ಆಗಿರುವ ಚಿತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕಾಪು ತಾಲೂಕಿನ ಎಲ್ಲೂರು ಮತ್ತು ಮುದರಂಗಡಿ ಭಾಗಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಸ್ಥಳೀಯರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ನಡೆಸುತ್ತಿದೆ. ಇದೀಗ ಪಣಿಯೂರು ಜಂಕ್ಷನ್ ಸಮೀಪವೂ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಚಿತ್ರ ಹರಿದಾಡುತ್ತಿರುವುದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಎಐ ಚಿತ್ರಗಳಿಂದ ಅರಣ್ಯ ಇಲಾಖೆಗೆ ಹೊಸ ಸವಾಲು!

ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಸಂಚಾರದ ನಕಲಿ ಚಿತ್ರಗಳು ಹಾಗೂ ವಿಡಿಯೋಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಇದರಿಂದ ನೈಜ ಘಟನೆಗಳನ್ನು ಗುರುತಿಸುವುದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ.

ಹೀಗಾಗಿ ಪಣಿಯೂರು ಜಂಕ್ಷನ್ ಸಮೀಪ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ವೈರಲ್ ಚಿತ್ರ ನೈಜವೇ ಅಥವಾ ಎಐ ತಂತ್ರಜ್ಞಾನದ ಮೂಲಕ ಸೃಷ್ಟಿಸಲಾದ ನಕಲಿ ಚಿತ್ರವೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕಿದೆ.

ಅಧಿಕೃತ ಮಾಹಿತಿ ದೊರೆಯುವವರೆಗೆ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಪರಿಶೀಲಿಸದ ಚಿತ್ರಗಳು ಮತ್ತು ವಿಡಿಯೋಗಳನ್ನು ಹಂಚಿಕೊಳ್ಳದಂತೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಒಂದು ವೇಳೆ ನಿಜವಾಗಿಯೂ ಚಿರತೆ ಕಂಡುಬಂದರೆ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಸ್ಥಳೀಯರಲ್ಲಿ ಮನವಿ ಮಾಡಲಾಗಿದೆ.

ಉಡುಪಿ : ಕಾಪು ತಾಲೂಕಿನ ಬೆಳಪು ಗ್ರಾಮದ ಪಣಿಯೂರು ಜಂಕ್ಷನ್ ಸಮೀಪದ ಹೆದ್ದಾರಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವಂತೆ ಕಾಣುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಶನಿವಾರ ರಾತ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನವೊಂದರಿಂದ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ ಎನ್ನಲಾಗಿದ್ದು, ಭಾನುವಾರದಿಂದ ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಆದರೆ ಚಿತ್ರದಲ್ಲಿರುವ ಪ್ರಾಣಿ ನಿಜವಾಗಿಯೂ ಚಿರತೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.