ಕರಾವಳಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವು ಬಹಳಷ್ಟು ಅಭಿವೃದ್ಧಿ ಆಗಿರುವುದರಿಂದ ಸಹಕಾರಿಗಳು ಜೊತೆಯಾಗಿ ಕೆಲಸ ಮಾಡಲು ಅನುಕೂಲವಾಗಿದೆ ಎಂದು 108 ವರ್ಷ ಇತಿಹಾಸವಿರುವ ಪ್ರತಿಷ್ಠಿತ ಪ್ರೊಟೆಸ್ಟೆಂಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾದ ಶರ್ಮಿಳಾ ಶೆಟ್ಟಿಯನ್ ರವರು ನುಡಿದರು.
ಅವರು ಇತ್ತೀಚೆಗೆ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಪ್ರಧಾನ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸೊಸೈಟಿ ನೀಡಿದ ಗೌರವ ಸ್ವೀಕರಿಸಿ ಮಾತನಾಡಿದರು.
ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಚ್ ವಸಂತ ಬರ್ನಾಡ್ ರವರು ಶೆಟ್ಟಿಯನ್ ರವರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಯಂಗ್ ಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಪಾಲ್ ಶೆಟ್ಟಿಯಾನ್, ಪ್ರಿಯದರ್ಶಿನಿಯ ಮುಖ್ಯ ಕಾರ್ಯನಿರ್ಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು.