ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ವತಿಯಿಂದ ‘ಸೇವಾ ಸೇತು ಅಭಿಯಾನ’, ಆರೋಗ್ಯ ತಪಾಸಣಾ ಶಿಬಿರ, ಪಲಾನುಭವಿಗಳಿಗೆ ಸನ್ಮಾನ

0
66

ವಿಶ್ವ ಮಟ್ಟದಲ್ಲಿ ಭಾರತದ ಘನತೆ, ಗೌರವ ಹೆಚ್ಚಿಸಿದ ಪ್ರಧಾನಿ ಮೋದಿ ಸೇವಾ ಬದ್ಧತೆ ಮೈಗೂಡಿಸಿಕೊಳ್ಳೋಣ : ಕುತ್ಯಾರು ನವೀನ್ ಶೆಟ್ಟಿ

ಸುಧೀರ್ಘ 25 ವರ್ಷಗಳ ಜನ ಕಲ್ಯಾಣ ಸೇವೆಯ ಜೊತೆಗೆ ವಿಶ್ವ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೇರಿಸಿ, ದೇಶದ ಘನತೆ, ಗೌರವ ಹೆಚ್ಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಸೇವಾ ಬದ್ಧತೆಯನ್ನು ಮೈಗೂಡಿಸಿಕೊಂಡು ಸಂಘಟಿತ ಪ್ರಯತ್ನದ ಮೂಲಕ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಯಶಸ್ವಿಗೊಳಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾದ ನೇತೃತ್ವದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ‘ಸೇವಾ ಸೇತು’ – ‘ಸರಕಾರ ನಿಮ್ಮ ಬಾಗಿಲಿಗೆ’ ಶೀರ್ಷಿಕೆಯಡಿ ಕೆಳ ಪರ್ಕಳದ ಶ್ರೀ ತುಳಜಾ ಭವಾನಿ ದೇವಿಕಟ್ಟೆ ಕೂಡು ಕಟ್ಟಿನ ಸಮುದಾಯ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ, ಆಯ್ದ ಐದು ಮಂದಿ ಪಲಾನುಭವಿಗಳಿಗೆ ಸನ್ಮಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಭಾತ್’ ವೀಕ್ಷಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಬಿಜೆಪಿ ಕೇವಲ ಅಧಿಕಾರಕ್ಕಾಗಿ ಮಾತ್ರ ರಾಜಕಾರಣ ಮಾಡದೇ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರೊರೆಸುವ ಸತ್ಕಾರ್ಯದಲ್ಲಿ ತೊಡಗಿದೆ. ದಿವಾಳಿಯ ಅಂಚಿಗೆ ತಲುಪಿರುವ ರಾಜ್ಯ ಕಾಂಗ್ರೆಸ್ ಸರಕಾರ ಆಡಳಿತ ವೈಫಲ್ಯವನ್ನು ಮರೆ ಮಾಚಲು ವಿವಿಧ ರೀತಿಯ ಹುನ್ನಾರಗಳ ಮೂಲಕ ಜನತೆಯ ದಾರಿ ತಪ್ಪಿಸುವ ವಿಫಲ ಯತ್ನ ನಡೆಸುತ್ತಿದೆ. ವಚನಭ್ರಷ್ಟ ರಾಜ್ಯ ಸರಕಾರದ ಭ್ರಷ್ಟಾಚಾರ, ಹಗರಣಗಳಿಂದ ರೋಸಿ ಹೋಗಿರುವ ಜನತೆಗೆ ಬಿಜೆಪಿಯೊಂದೇ ಪರಿಹಾರ ಎಂದೆನಿಸಿರುವುದು ವಾಸ್ತವ. ಇತ್ತೀಚೆಗೆ ನಡೆದ ಬಳ್ಳಾರಿ ಚಲೋ ಪಾದಯಾತ್ರೆಯ ಬಳಿಕ ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಠಿಯಾಗಿದ್ದು 2028ರಲ್ಲಿ ಬಿಜೆಪಿ ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷದ ಸೇವಾ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಜೊತೆಗೆ ಬೂತ್ ಮಟ್ಟದಲ್ಲಿ ಸದೃಢ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ತಿಳಿಸಿದರು.

ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಭುಜಂಗ ನಾಯ್ಕ್ ಮಣಿಪಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೇಂದ್ರ ಸರಕಾರದ ಯೋಜನೆಯ ಫಲಾನುಭವಿಗಳಾದ ಸುಂದರಿ ಬಾಯಿ, ಭವ್ಯ ನಾಯ್ಕ್, ಅನಿತಾ ನಾಯ್ಕ್, ಸುನಂದ ನಾಯ್ಕ್, ಚಂದ್ರಶೇಖರ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು.

ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ರೇಷ್ಮಾ ಉದಯ ಶೆಟ್ಟಿ, ಅಭಿಯಾನದ ಜಿಲ್ಲಾ ಸಹ ಸಂಚಾಲಕ ಉಮೇಶ್ ಎ. ನಾಯ್ಕ್ ಚೇರ್ಕಾಡಿ, ಕಾರ್ಯಕ್ರಮದ ಉಸ್ತುವಾರಿ ರಾಘವೇಂದ್ರ ಕುಂದರ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ನಗರಸಭೆಯ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಾಜಿ ನಗರಸಭಾ ಸದಸ್ಯೆ ವಿಜಯಲಕ್ಷ್ಮಿ, ಉಡುಪಿ ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಲತ, ಪ್ರಧಾನ ಕಾರ್ಯದರ್ಶಿ ಸುಗುಣಾ ನಾಯ್ಕ್, ಬಿಜೆಪಿ ಪರ್ಕಳ ವಾರ್ಡ್ ಅಧ್ಯಕ್ಷ ಹೇಮಂತ್ ಕುಮಾರ್, ತುಳಜಾ ಭವಾನಿ ದೇವಿ ಕಟ್ಟೆಯ ಗುರಿಕಾರ ನಾರಾಯಣ ನಾಯ್ಕ್ ಸಹಿತ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಿಲ್ಲಾ ಎಸ್.ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಭಾಷ್ ನಾಯ್ಕ್ ಸ್ವಾಗತಿಸಿ, ಉಮೇಶ್ ನಾಯ್ಕ್ ನೂಜಿನಬೈಲು ವಂದಿಸಿದರು. ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ತಂಡದ ಸದಸ್ಯ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.