ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಹೆಮ್ಮೆಯ ಪಾಲಿಗೆ ಸದಾ ಹೆಮ್ಮೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತ ನಿರ್ಮಾಣಕ್ಕಾಗಿ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಮೂಲಕ ವಿಶ್ವಗುರು ಭಾರತದ ಕನಸು ನನಸಾಗಿಸುವ ಸಂಕಲ್ಪ ನಾವೆಲ್ಲರೂ ಮಾಡೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರೂ. 15 ಲಕ್ಷ ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಓರ್ವ ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತರಾಗಿದ್ದು ಕ್ಷೇತ್ರದ ಜನತೆಯ ಸಹಕಾರದಿಂದ ಉಡುಪಿ ಕ್ಷೇತ್ರವನ್ನು ಮಾದರಿಯಾಗಿ ರೂಪಿಸಲು ಬದ್ಧ ಎಂದರು.
ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ತೆಂಕನಿಡಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಅರುಣ್ ಜತ್ತನ್, ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಶ್ರೀಮತಿ ಗಾಯತ್ರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಶರತ್ ಬೈಲಕೆರೆ, ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಸುವರ್ಣ, ಶ್ರೀ ಸತೀಶ್ ಪೂಜಾರಿ,ಶ್ರೀಮತಿ ಮಾಲಿನಿ, ಶ್ರೀಮತಿ ಪುಷ್ಪ ಉಮೇಶ್, ಪಕ್ಷದ ಪ್ರಮುಖರಾದ ಶ್ರೀ ವಿಜಯ ಪ್ರಕಾಶ್, ಶ್ರೀ ಕಿರಣ್ ಪಿಂಟೋ, ಶ್ರೀಮತಿ ಕಾವೇರಿ ಗಾಣಿಗ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.