ಮುಡಿಪು; ‘ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು, ಅದರಿಂದ ಆತ್ಮ ಸಂತೃಪ್ತಿ ಪ್ರಾಪ್ತವಾಗುತ್ತದೆ’ ಎಂದು ಪಂಪ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ವಿವೇಕ ರೈ ಅವರು ಹೇಳಿದರು. ಅವರು ಮಂಗಳ ಗಂಗೋತ್ರಿ ಮಂಗಳ ಸಭಾಂಗಣದಲ್ಲಿ ನಡೆದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಅಧ್ಯಾಪಕ, ಸಿಬ್ಬಂದಿಗಳ ಒಕ್ಕೂಟ ‘ಗಿಳಿವಿಂಡು’ ಇದರ ನಾಲ್ಕನೇ ಮಹಾಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮದಲ್ಲಿ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬೋಧನೆ ಮಾಡಿದ ಪ್ರಾಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.
ಗಿಳಿವಿಂಡು ಇದರ ಅಧ್ಯಕ್ಷ ಪ್ರೊಫೆಸರ್ ಶಿವರಾಮ್ ಶೆಟ್ಟಿ ಸ್ವಾಗತಿಸಿದರು. ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರ ಪ್ರೊ. ನಾಗಪ್ಪ ಗೌಡ ಅವರು ವಂದಿಸಿದರು. ಡಾ. ಯಶುಕುಮಾರ್ ಡಿ ಕಾರ್ಯಕ್ರಮವನ್ನು ನಿರೂಪಿಸಿದರು.

