ಉಡುಪಿ ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 173ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ 23 ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತ ಶಿಕ್ಷಕರಾದ ಸಂಜೀವ್ ಹೆಚ್ ನಾಯಕ್ ಪರ್ಕಳ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ಆಗಸ್ಟ್ 24 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು.

