ಸಮಾಜದ ಕೆಲಸ ದೇವರ ಕೆಲಸ. ಮನುಷ್ಯ ಇತರರ ಅನುಕೂಲಕ್ಕಾಗಿ ನಿಸ್ವಾರ್ಥ ಮನಸ್ಸಿನಿಂದ ದುಡಿಯುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ದೇಶ ಸೇವೆಯೇ ಈಶ ಸೇವೆ ಎಂಬ ಮಾತಿನಂತೆ ನಮ್ಮ ಮೇಲೆ ನಂಬಿಕೆ ಇಟ್ಟ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ಸಂಘಟನೆಯ ಅಧ್ಯಕ್ಷರಾದವರು ಸಂಘಟನೆಯ ಪ್ರತಿ ಸದಸ್ಯರ ನೋವು ನಲಿವಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಬೇಕು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಡಾ. ದೊರೆಸ್ವಾಮಿಯವರು ಸಮರ್ಥ ನಾಯಕರಾಗಿರುತ್ತಾರೆ. ಸಮಾಜಮುಖಿ ಕೆಲಸಗಳನ್ನು ನಿರ್ವಹಿಸುವಾಗ ನಿಸ್ವಾರ್ಥ ಮನಸ್ಸಿನಿಂದ ಪ್ರಾಮಾಣಿಕವಾಗಿ ನಮ್ಮ ಕರ್ತವ್ಯವನ್ನು ನಿರ್ವಹಿಸೋಣ ಎಂಬ ಸಂದೇಶವನ್ನು ಕೆ. ಎಂ. ಎಫ್. ಅಧ್ಯಕ್ಷರಾದ ಸುಚರಿತ ಶೆಟ್ಟಿ ಅವರು ನೀಡಿದರು.
ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಸರಕಾರಿ ನೌಕರರನ್ನು ಉದ್ದೇಶಿಸಿ ಮಾತನಾಡಿದರು.
ನೌಕರ ಸಂಘದ ಉತ್ಸಾಹಿ ಯುವ ನಾಯಕರಾದ ಡಾ. ದೊರೆಸ್ವಾಮಿ ಅವರ ನೇತೃತ್ವದಲ್ಲಿ ಸಂಘಟನೆ ಪ್ರತಿಯೊಬ್ಬ ಸದಸ್ಯರ ನೋವು ನಲಿವಿಗೆ ಸ್ಪಂದಿಸುವಂತಾಗಲಿ. ನೌಕರರ ಸಾಮೂಹಿಕ ಸಮಸ್ಯೆಗಳಿಗೆ ಹೋರಾಟದ ಮೂಲಕ ಜಯ ಲಭಿಸುವಂತಾಗಲಿ ಎಂದು ಹೇಳುತ್ತಾ, ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು.
ಸಮಾರಂಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನೀರ್ಕೆರೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಯಮುನಾ ಕೆ. ಅವರನ್ನು ಸನ್ಮಾನಿಸಲಾಯಿತು. ಚುನಾವಣಾ ಅಧಿಕಾರಿಯಾಗಿರುವ ಶೀನ ನಾಯಕ್, ಕೆ. ಎಂ. ಎಫ್. ಅಧ್ಯಕ್ಷರಾದ ಸುಚುರಿತ ಶೆಟ್ಟಿ,ನಿಕಟ ಪೂರ್ವ ಅಧ್ಯಕ್ಷರಾದ ನಾಗೇಶ ಎಸ್., ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕವಿತಾ, ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಅಧ್ಯಕ್ಷರಾದ ಡಾ.ರಾಮಕೃಷ್ಣ ಶಿರೂರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸುಧಾಕರ ಇವರನ್ನು ಗೌರವಿಸಲಾಯಿತು.
ಡಾ. ಕವಿತಾ, ಡಾ. ರಾಮಕೃಷ್ಣ ಶಿರೂರು, ನಾಗೇಶ್ ಎಸ್. ಅವರು ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಶುಭಾಶಯ ಕೋರಿದರು. ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಡಾ. ದೊರೆಸ್ವಾಮಿ ಕೆ.ಎನ್. ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಪರಿಷತ್ ಸದಸ್ಯರಾದ ರವೀಂದ್ರ ಅಂಕಲಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕಿ ವಾಣಿ ಪ್ರಾರ್ಥನೆ ನಡೆಸಿಕೊಟ್ಟರು. ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ರೆಖ್ಯ ಎಲ್ಲರನ್ನು ಸ್ವಾಗತಿಸಿದ ರು. ಖಜಾಂಚಿ ಶಾಂತಮ್ಮ ಧನ್ಯವಾದ ಸಲ್ಲಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ನಾಗರತ್ನ ಶಿರೂರು ಕಾರ್ಯಕ್ರಮ ನಿರ್ವಹಿಸಿದರು.