ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್ ಸಾರತ್ಯದ ಕನ್ನಡ ಭವನ ಕಾಸರಗೋಡು ಇದರ ರಜತ ಸಂಭ್ರಮ ಶುಭ ಕಾರ್ಯಕ್ರಮವಾದ “ನಾಡು -ನುಡಿ ಸಂಭ್ರಮ 2026, 18-01-2026 ರಂದು ಕಾಸರಗೋಡು ಕನ್ನಡ ಭವನ ರಜತ ಮಂಟಪ ವೇದಿಕೆಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮ ದಲ್ಲಿ ಕೊಡಗು ಜಿಲ್ಲೆಯ ಮಡಿಕೇರಿಯ ಪತ್ರಕರ್ತ, ಲೇಖಕ ಚಂದನ್ ನಂದರ ಬೆಟ್ಟು ಇವರೀಗೆ ಕನ್ನಡ ಭವನ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಯಾದ “ನಾಡೋಜ ಡಾ. ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ,” 2026. ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

