ಗ್ರಂಥಾಲಯಗಳು ಜ್ಞಾನ ಮಂದಿರಗಳು, ಪುಸ್ತಕ ಮನುಷ್ಯನ ಸಾರ್ಥಕ ಸ್ನೇಹಿತ – ಪವನ್ ಮೈರ್ಪಾಡಿ

0
3

ಕುಳಾಯಿ : ನಗರ ಕೇಂದ್ರ ಗ್ರಂಥಾಲಯದ ಶಾಖೆಯಾದ ಕುಳಾಯಿ ಗ್ರಂಥಾಲಯದಲ್ಲಿ 2026ನೇ ಸಾಲಿನ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರಂಭವು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕಸ್ತೂರಿ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವ ಸಾಹಿತಿ, ಬರಹಗಾರ ಹಾಗೂ ಆಧ್ಯಾತ್ಮಿಕ ಚಿಂತಕ ಪವನ್ ಮೈರ್ಪಾಡಿ ಮಾತನಾಡಿ, “ಗ್ರಂಥಾಲಯಗಳು ಜ್ಞಾನ ಮಂದಿರಗಳಿದ್ದಂತೆ. ಪುಸ್ತಕವು ಮನುಷ್ಯನ ಸಾರ್ಥಕ ಸ್ನೇಹಿತ. ಜ್ಞಾನಾರ್ಜನೆ, ವ್ಯಕ್ತಿತ್ವ ವಿಕಸನ ಹಾಗೂ ಉತ್ತಮ ಜೀವನ ಮೌಲ್ಯಗಳನ್ನು ಬೆಳೆಸುವಲ್ಲಿ ಪುಸ್ತಕಗಳ ಪಾತ್ರ ಮಹತ್ವದ್ದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಗ್ರಂಥಾಲಯದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು” ಎಂದರು.

ಗ್ರಂಥಾಲಯ ಸಪ್ತಾಹದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ಓದುಗರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಗ್ರಂಥಾಲಯದ ಸಹಾಯಕಿ ಸವಿತಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಿಶೋರಿ ಕಾರ್ಯಕ್ರಮ ನಿರೂಪಿಸಿದರು. ತೇಜಸ್ವಿ ವಂದಿಸಿದರು.

ಈ ಸಂದರ್ಭದಲ್ಲಿ ಜೆ. ವಿಶ್ವನಾಥ್, ಉಮೇಶ್, ಗಣೇಶ್ ಕುಲಾಲ್, ವಿಲ್ಫ್ರೆಡ್ ಹಾಗೂ ಗ್ರಂಥಾಲಯದ ಸಿಬ್ಬಂದಿ ವಿನಯ ಉಪಸ್ಥಿತರಿದ್ದರು. ಗ್ರಂಥಾಲಯದ ಸದಸ್ಯರು, ಸಾರ್ವಜನಿಕ ಓದುಗರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.