ಮಂಗಳೂರು: ತುರ್ತು ಸಂದರ್ಭಗಳಲ್ಲಿ ಪ್ರತಿಯೊಂದು ಕ್ಷಣವು ಅಮೂಲ್ಯ ಎಂಬ ಅರಿವು ಮೂಡಿಸಲು ಹಾಗೂ ಜೀವ ರಕ್ಷಣಾ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಪ್ರಥಮ ಪ್ರತಿಕ್ರಿಯೆ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 31, 2025 ರಂದು ಕಾಲೇಜು ಆವರಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮ ಮೊದಲಿಗೆ ಮುಖ್ಯ ಅತಿಥಿಯಾಗಿ ಆಗಮಿಸಿರುವ ಡಾ.ಕಿಶೋರ್ ಕುಮಾರ್ ಪ್ರಾಂಶುಪಾಲರು ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ತರಬೇತಿ ಕೇಂದ್ರ ಸುರತ್ಕಲ್ ಮಂಗಳೂರು. ಅವರು ತಮ್ಮ ಅತಿಥಿ ಭಾಷಣದಲ್ಲಿ ತುರ್ತು ಸಂದರ್ಭಗಳಲ್ಲಿ ಕರುಣೆ, ಸಮುದಾಯದ ಹೊಣೆಗಾರಿಕೆಯ ಮಹತ್ವವನ್ನು ಒತ್ತಿ ಹೇಳಿದರು. ಪ್ರತಿ ನಾಗರಿಕನು “ಮೊದಲ ಪ್ರತಿಕ್ರಿಯಾಕಾರಿ” ಆಗಬೇಕೆಂಬ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕೆಂದು ಅವರು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಹಾರ್ದಿಕ್ ಪಿ. ಚೌಹಾಣ್ ಅಧ್ಯಕ್ಷೀಯ ಭಾಷಣದಲ್ಲಿ ಮಾನವೀಯತೆ, ಸಹಾನುಭೂತಿ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ಅಶ್ವಿನಿ ಶೆಟ್ಟಿ ಅತಿಥಿಗಳಿಗೆ ಸ್ವಾಗತಿಸಿದರು. ಸಹ ಯೋಜನಾಧಿಕಾರಿ ಕು.ವಿಶ್ವಾತ್ಮಿಕಾ ವಂದಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಹಾಡಿದರು, ವಿದ್ಯಾರ್ಥಿ ಸಂಯೋಜಕಿಯಾದ ಶ್ರಾವ್ಯ ಜೆ .ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ನಂತರ ಡಾ. ಕಿಶೋರ್ ಕುಮಾರ್ ಪ್ರಾಂಶುಪಾಲರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರ ಸುರತ್ಕಲ್ ಅವರು ವಿದ್ಯಾರ್ಥಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ಪ್ರಾಥಮಿಕ ನೆರವು ನೀಡುವ ಕೌಶಲ್ಯದ ಕುರಿತು ಮೊದಲ ಅಧಿವೇಶನವನ್ನು ನಡೆಸಿದರು. ಎರಡನೆಯ ಅಧಿವೇಶನದಲ್ಲಿ ಡಾ. ರಂಜನ್ ಆರ್ ಕೆ ಕಸ್ತೂರ್ ಬಾ ಮೆಡಿಕಲ್ ಕಾಲೇಜು ಮಂಗಳೂರು ಇವರು ವಿದ್ಯಾರ್ಥಿಗಳಲ್ಲಿ ತುರ್ತು ಸಂದರ್ಭಗಳಲ್ಲಿ ಜೀವ ರಕ್ಷಣೆಯ ಮಹತ್ವ ಸಾಮಾಜಿಕ ಹೊಣೆಗಾರಿಕೆ , ಜವಾಬ್ದಾರಿ ಮತ್ತು ಮಾನವೀಯ ಮೌಲ್ಯಗಳ ಅರಿವನ್ನು ಮೂಡಿಸಿದರು.


