ಉಡುಪಿ–ಕಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಕಿನ ಸಮಸ್ಯೆ; ಅಪಘಾತ ಭೀತಿಯಲ್ಲಿ ವಾಹನ ಸವಾರರು

0
18

ಕಾಪು : ಉಡುಪಿಯಿಂದ ಕಾಪು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ, ಕಾಪು ಪೇಟೆಗೆ ಸಂಪರ್ಕ ಕಲ್ಪಿಸುವ ತಿರುವು ರಸ್ತೆಯ (ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ) ದಾರಿದೀಪಗಳು ಉರಿಯದೆ ಕತ್ತಲು ಆವರಿಸಿದೆ.

ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ವಾಹನಗಳು ಹಾಗೂ ಪಾದಚಾರಿಗಳು ಸಂಚರಿಸುವಾಗ ತೊಂದರೆ ಎದುರಾಗುತ್ತಿದ್ದು, ಅಪಘಾತ ಸಂಭವಿಸುವ ಆತಂಕವೂ ಸಾರ್ವಜನಿಕರಲ್ಲಿ ಮೂಡಿದೆ. ಪ್ರಮುಖ ಸಂಪರ್ಕ ರಸ್ತೆಯಾಗಿರುವ ಇಲ್ಲಿ ದಾರಿದೀಪಗಳು ಕಾರ್ಯನಿರ್ವಹಿಸದಿರುವುದು ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಆತಂಕಕಾರಿ ವಿಷಯವಾಗಿದೆ.

ಈ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ತಕ್ಷಣ ಗಮನಹರಿಸಿ, ದಾರಿದೀಪಗಳನ್ನು ದುರಸ್ತಿಗೊಳಿಸಿ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸಾರ್ವಜನಿಕರ ಸಮಸ್ಯೆಗೆ ಇಲಾಖೆ ಕೂಡಲೇ ಸ್ಪಂದಿಸಬೇಕೆಂಬುದು ನಾಗರಿಕರ ಒತ್ತಾಯವಾಗಿದೆ.