ಮೂಡುಬಿದಿರೆ: ಸಮಾಜ ಸೇವೆಯ ಮೂಲಕ ನಿಸ್ವಾರ್ಥ ಭಾವದಿಂದ ನಿರಂತರ ಶ್ರಮಿಸುತ್ತಿರುವ ಮೂಡುಬಿದಿರೆ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ರುಕ್ಕಯ್ಯ ಪೂಜಾರಿ ಅವರನ್ನು ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಮೂಡುಬಿದಿರೆ ಲಯನ್ಸ್ ಕ್ಲಬ್ ವತಿಯಿಂದ ಜ. 31ರಂದು ಸನ್ಮಾನಿಸಿ ಗೌರವಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಬೊನವೆಂಚರ್ ಮಿನೇಜಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಪ್ರಾಂತ್ಯದ ಪ್ರಥಮ ಮಹಿಳೆ ಪ್ರತಿಭಾ ಹೆಬ್ಬಾರ್, ವಲಯಾಧ್ಯಕ್ಷರುಗಳಾದ ಉಮೇಶ್ ಶೆಟ್ಟಿ, ರಾಯನ್ ರೋಶನ್ ಡಿಸೋಜ, ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಜೊಸ್ಸಿ ಮಿನೇಜಸ್, ಕಾರ್ಯದರ್ಶಿ ವಿನೋದ್ ಡೇಸಾ, ಖಜಾಂಚಿ ಪ್ರಶಾಂತ್ ಶೆಟ್ಟಿ, ಮೆಲ್ವಿನ್ ಸಲ್ದಾನ ಜೊತೆಗೂಡಿ ರುಕ್ಕಯ್ಯ ಪೂಜಾರಿ ಅವರನ್ನು ಸನ್ಮಾನಿಸಿದರು. ಪ್ರಾಂತ್ಯದ ವಿವಿಧ ಕ್ಲಬ್‌ಗಳ ಅಧ್ಯಕ್ಷರು ಉಪಸ್ಥಿತರಿದ್ದರು. ವಲೇರಿಯನ್ ಸಿಕ್ವೇರಾ ಸನ್ಮಾನ ಪತ್ರ ವಾಚಿಸಿದರು. ಶಿವಪ್ರಸಾದ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
ಲಯನ್ಸ್ ಕ್ಲಬ್: ರುಕ್ಕಯ್ಯ ಪೂಜಾರಿಯವರಿಗೆ ಸನ್ಮಾನ
RELATED ARTICLES