ವಿಜ್ಞಾನವೇ ಜ್ಞಾನದ ಬೆಳಕು – ಅನ್ವೇಷಣೆಯೇ ಪ್ರಗತಿಯ ಮೆಟ್ಟಿಲು
ಲಯನ್ಸ್ ಆಂಗ್ಲ ಮಾಧ್ಯಮ ಶಾಲೆ, ಸಚ್ಚೇರಿಪೇಟೆಯಲ್ಲಿ ದಿನಾಂಕ 04-11-2026ರ ಬುಧವಾರದಂದು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸೃಜನಶೀಲತೆ ಹಾಗೂ ಸಂಶೋಧನಾ ಆಸಕ್ತಿಯನ್ನು ಬೆಳೆಸುವ ಉದ್ದೇಶದಿಂದ ವಿಜ್ಞಾನ ಮಾದರಿ ಮತ್ತು ಯೋಜನಾ ಪ್ರದರ್ಶನ ಸ್ಪರ್ಧೆಯನ್ನು ಶಾಲಾ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಡಾ. ಉಜ್ವಲ್ ಕುಮಾರ್, ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರ, ಸಚ್ಚೇರಿಪೇಟೆ ಇವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜ್ಞಾನವು ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗಿರದೆ, ನಮ್ಮ ದೈನಂದಿನ ಜೀವನದ ಪ್ರತಿಯೊಂದು ಹಂತದಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ತಾವು ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ಅರ್ಥಮಾಡಿಕೊಳ್ಳಲು ಇಂತಹ ವಿಜ್ಞಾನ ಮಾದರಿ ಪ್ರದರ್ಶನಗಳು ಉತ್ತಮ ವೇದಿಕೆಯಾಗಿವೆ. ಚಿಕ್ಕ ವಯಸ್ಸಿನಿಂದಲೇ ಕುತೂಹಲ, ಪ್ರಶ್ನಿಸುವ ಮನೋಭಾವ ಹಾಗೂ ಹೊಸತನ್ನು ಕಂಡುಹಿಡಿಯುವ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ಸೋಲುಗಳಿಗೆ ಹೆದರದೆ ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಮುನ್ನಡೆದಾಗ ಉತ್ತಮ ಆವಿಷ್ಕಾರಗಳನ್ನು ಮಾಡಲು ಸಾಧ್ಯ. ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಭವಿಷ್ಯದ ಉತ್ತಮ ವಿಜ್ಞಾನಿಗಳಾಗಿ ಹೊರಹೊಮ್ಮಬೇಕು ಎಂದು ಹಿತವಚನ ನೀಡಿದರು.

ಮುಂಡ್ಕೂರು–ಕಡಂದಲೆ ಲಯನ್ಸ್ ಕ್ಲಬ್ನ ಕಾರ್ಯದರ್ಶಿ ಲಯನ್ ರೋನಾಲ್ಡ್ ಪೀಟರ್ ಮಸ್ಕರೇನಸ್ ಮಾತನಾಡಿ, ಇಂತಹ ವಿಜ್ಞಾನ ಮಾದರಿ ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಚಿಕ್ಕ ವಯಸ್ಸಿನಿಂದಲೇ ವಿಜ್ಞಾನದ ಬಗ್ಗೆ ಆಸಕ್ತಿ ಹಾಗೂ ಸೃಜನಶೀಲ ಚಿಂತನೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ತಮ್ಮದೇ ಆದ ಕಲ್ಪನೆಗಳಿಗೆ ರೂಪ ನೀಡಿ, ಹೊಸ ಹೊಸ ಮಾದರಿಗಳನ್ನು ತಯಾರಿಸುವ ಮೂಲಕ ಕಲಿಕೆಯನ್ನು ಹೆಚ್ಚು ಆಸಕ್ತಿದಾಯಕವಾಗಿಸಿಕೊಳ್ಳಬಹುದು. ಇಂತಹ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಭವಿಷ್ಯದಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಂಸ್ಥೆಯ ಸಂಚಾಲಕರಾದ ಲ.ಕೆ. ಸತ್ಯಶಂಕರ್ ಶೆಟ್ಟಿಯವರು ಮಾತನಾಡಿ, ವಿದ್ಯಾರ್ಥಿಗಳು ಎಳವೆಯಲ್ಲಿಯೇ ಇಂತಹ ಸೃಜನಶೀಲ ಹಾಗೂ ವೈಜ್ಞಾನಿಕ ಆಸಕ್ತಿಗಳನ್ನು ಬೆಳೆಸಿಕೊಳ್ಳಬೇಕು. ಕೇವಲ ಪಠ್ಯಪುಸ್ತಕದ ಅಧ್ಯಯನಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಜ್ಞಾನಕ್ಕೂ ಹೆಚ್ಚಿನ ಮಹತ್ವ ನೀಡಬೇಕು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಗಮನಿಸಿ, ಹೊಸ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರುವ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಶಾಲೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ವೇದಿಕೆಯಲ್ಲಿ ಮುಂಡ್ಕೂರು–ಕಡಂದಲೆ ಲಯನ್ಸ್ ಕ್ಲಬ್ನ ಪೂರ್ವಾಧ್ಯಕ್ಷರಾದ ಲ. ಆನಂದ ಆಚಾರ್ಯ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಸುರೇಶ್ ಶೆಟ್ಟಿ, ಶಿಕ್ಷಕ–ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸುರೇಶ್ ಪೂಜಾರಿ ಹಾಗೂ ಶಾಲಾ ಮುಖ್ಯ ಶಿಕ್ಷಕರಾದ ಗೌರವ್ ಆರ್. ಕೆ. ಉಪಸ್ಥಿತರಿದ್ದರು.
ವಿಜ್ಞಾನ ಮಾದರಿಗಳ ಸ್ಪರ್ಧೆಯ ತೀರ್ಪುಗಾರರಾಗಿ ಮೈಟ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರದ್ಯುನ್ನ, ಶಾಕೀರ್, ಮನೋಜ್ ಹಾಗೂ ಶ್ರೀಶಾ ಪ್ರಸಾದ್ ಅವರು ಸಹಕರಿಸಿದರು.
ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಮನೋಜ್ ನಿರೂಪಿಸಿದರು.
ವಿದ್ಯಾರ್ಥಿಗಳು ತಾವು ತಯಾರಿಸಿದ ವಿವಿಧ ವೈಜ್ಞಾನಿಕ ಮಾದರಿಗಳು ಹಾಗೂ ಯೋಜನೆಗಳನ್ನು ಅತ್ಯಂತ ಆಸಕ್ತಿಯಿಂದ ಪ್ರದರ್ಶಿಸಿದರು. ಪ್ರತಿಯೊಂದು ಮಾದರಿಯ ಹಿಂದಿರುವ ವೈಜ್ಞಾನಿಕ ತತ್ವ, ಅದರ ಕಾರ್ಯವಿಧಾನ ಹಾಗೂ ದೈನಂದಿನ ಜೀವನದಲ್ಲಿ ಅದರ ಉಪಯುಕ್ತತೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವಿವರಿಸಿದರು.
ವಿದ್ಯಾರ್ಥಿಗಳ ಪ್ರತಿಭೆ, ಕಲ್ಪನಾಶಕ್ತಿ, ಪರಿಶ್ರಮ ಹಾಗೂ ವೈಜ್ಞಾನಿಕ ಚಿಂತನೆಗಳು ಈ ಪ್ರದರ್ಶನದಲ್ಲಿ ಅನಾವರಣಗೊಂಡವು. ವಿಜ್ಞಾನವು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗಿರದೆ, ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂಬುದನ್ನು ಈ ವಸ್ತುಪ್ರದರ್ಶನ ಸಾರಿತು.
ಶಿಕ್ಷಕರು ವಿದ್ಯಾರ್ಥಿಗಳ ವೈಜ್ಞಾನಿಕ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಹಾಗೂ ಹೊಸ ಆಲೋಚನೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಯನ್ನು ಒದಗಿಸಿತು.
SCIENCE EXPO-3 ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಹೊಸತನದ ಚಿಂತನೆ, ಸಂಶೋಧನಾ ಆಸಕ್ತಿ ಹಾಗೂ ಪ್ರಾಯೋಗಿಕ ಕಲಿಕೆಗೆ ಪ್ರೇರಣೆ ನೀಡಿದ ಅರ್ಥಪೂರ್ಣ ಮತ್ತು ಸ್ಮರಣೀಯ ಕಾರ್ಯಕ್ರಮವಾಗಿ ಮೂಡಿಬಂದಿತು.

