ಕನ್ನಡ ಸಾರಸ್ವತ ಲೋಕದ ಹಿರಿಯ ವಿದ್ವಾಂಸ ಮುಳಿಯ ತಿಮ್ಮಪ್ಪಯ್ಯ ಅವರ ನೆನಪಿನಲ್ಲಿ ನೀಡಲಾಗುವ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿಗೆ ಖ್ಯಾತ ಗಮಕ ವ್ಯಾಖ್ಯಾನಕಾರ, ಯಕ್ಷಗಾನ ಪ್ರಸಂಗಕರ್ತ, ಸಾಹಿತಿ ಕಬ್ಬಿನಾಲೆ ವಸಂತ ಭಾರದ್ವಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರಿನ ಡಾ.ನಾ.ದಾಮೋದರ ಶೆಟ್ಟಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಈ ಆಯ್ಕೆ ಮಾಡಿದೆ. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ನೀಡಲಾಗುವ ಈ ಪ್ರಶಸ್ತಿ 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾರ್ಚ್ ತಿಂಗಳ ಕೊನೆಯಲ್ಲಿ ನಡೆಯಲಿದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.