0
207

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್​​: ಕಸದ ಲಾರಿಯಲ್ಲಿ ಮಹಿಳೆ ಶವವಾಗಿ ಪತ್ತೆ!

ಬೆಂಗಳೂರು: ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು  ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಇಬ್ಬರು ಮಕ್ಕಳ ತಾಯಿ ಜತೆ ವಿವಾಹಿತನ ಲಿವಿಂಗ್ ಟುಗೆದರ್​​ನಲ್ಲಿದ್ದ  ವ್ಯಕ್ತಿಯೇ ಕೊಲೆ ಮಾಡಿದ ವಿಚಾರ ಗೊತ್ತಾಗಿದ್ದು, ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯವನ್ನು ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ.

ಆಶಾ, ಸಂಶುದ್ದೀನ್ ವಿಚಿತ್ರ ಪ್ರೇಮ್ ಕಹಾನಿ

ಕೊಲೆ ಆರೋಪಿ ಸಂಶುದ್ದೀನ್ ಅಸ್ಸಾಂ ಮೂಲದವ. ಆತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಹೆಂಡತಿ ಹಾಗೂ ಮಕ್ಕಳು ಅಸ್ಸಾಂನಲ್ಲೇ ಇದ್ದು, ಸಂಶುದ್ದೀನ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಆಶಾ ಪರಿಚಯವಾಗಿದೆ. ಆಶಾ ಗಂಡ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ಇಬ್ಬರಲ್ಲೂ ಪ್ರಮಾಂಕುರವಾಗಿದ್ದು, ಹುಳಿಮಾವಿನಲ್ಲಿ ಮನೆ ಮಾಡಿಕೊಂಡು ಲಿವಿಂಗ್ ಟುಗೆದರ್​​​ನಲ್ಲಿದ್ದರು.

ಕತ್ತು ಹಿಸುಕಿ ಕೊಲೆ, ಶವವನ್ನು ಕಸದ ಲಾರಿಗೆ ಎಸೆದು ಪರಾರಿ

ಲಿವಿಂಗ್ ಟುಗೆದರ್​​​ನಲ್ಲಿದ್ದ ಆರೋಪಿ ಸಂಶುದ್ದೀನ್ ಹಾಗೂ ಆಶಾ ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ಆರಂಭಿಸಿದ್ದರು ಎನ್ನಲಾಗಿದೆ. ಶನಿವಾರ ಜಗಳ ಅತಿರೇಕಕ್ಕೆ ತಿರುಗಿದ್ದು, ಆಶಾ ಕತ್ತು ಹಿಸುಕಿ ಸಂಶುದ್ದೀನ್ ಕೊಲೆ ಮಾಡಿದ್ದಾನೆ.

LEAVE A REPLY

Please enter your comment!
Please enter your name here