20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮದ ಲೋಗೋ ಬಿಡುಗಡೆ

0
19

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಮಾಜದ ಒಳಿತಿಗಾಗಿ ಕೈಗೊಳ್ಳುವ ಪ್ರತಿಯೊಂದು ಕಾರ್ಯವು ದೇವರ ಸೇವೆಗೆ ಸಮಾನ – ಎಸ್. ಕೆ. ಸಾಲ್ಯಾನ್

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೇತೃತ್ವದಲ್ಲಿ ಜರಗಲಿರುವ 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮದ ಲೋಗೋ ಬಿಡುಗಡೆ ಕಾರ್ಯಕ್ರಮವು ಬೆಳ್ಮಣ್ಣು ಶ್ರೀ ಕೃಷ್ಣ ನಿಲಯದಲ್ಲಿ ನಡೆಯಿತು.

ಬೆಳ್ಮಣ್ಣು ಶ್ರೀ ಕೃಷ್ಣ ಸಮೂಹ ಸಂಸ್ಥೆಯ ಮಾಲಕರಾದ ಎಸ್. ಕೆ. ಸಾಲ್ಯಾನ್ ಅವರು ಲೋಗೋ ಬಿಡುಗಡೆಗೊಳಿಸಿ ಮಾತನಾಡಿದವರರು ಸಮಾಜಮುಖಿ ಸೇವಾ ಕಾರ್ಯದ ಜೊತೆ ಧಾರ್ಮಿಕ, ಸಾಂಸ್ಕೃತಿಕ, ಕ್ರೀಡೆ, ಶಿಕ್ಷಣ ಮುಂತಾದ ಜನಪಯೋಗಿ ಸೇವಾ ಕಾರ್ಯಕ್ರಮಗಳ ಮೂಲಕ ಯಶಸ್ಸಿನ ಹೊಸ ಮೈಲುಗಲ್ಲನ್ನು ಸಾಧಿಸುತ್ತಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ಬಿನ ಸಾಧನೆ ಎಲ್ಲರಿಗೂ ಮಾದರಿ, ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಮಾಜದ ಒಳಿತಿಗಾಗಿ ಕೈಗೊಳ್ಳುವ ಪ್ರತಿಯೊಂದು ಕಾರ್ಯವು ದೇವರ ಸೇವೆಗೆ ಸಮಾನ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ ಕೆಮ್ಮಣ್ಣು, ಪೂರ್ವಾಧ್ಯಕ್ಷರುಗಳಾದ ದಿನೇಶ್ ಪೂಜಾರಿ ಬಿರೋಟ್ಟು, ಸುರೇಶ್ ಕಾಸರಬೈಲು, ಮಾಜಿ ಕಾರ್ಯದರ್ಶಿ ವೀಣಾ ಪೂಜಾರಿ, ಮಾಜಿ ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಸಂಗೀತ ತಂಡದ ಸಹ ನಿರ್ದೇಶಕಿ ವೀಣಾ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.