ನವದೆಹಲಿ: ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಶನಿವಾರ ಪ್ರಕಟಿಸಿದೆ.
ದೇಶದಾದ್ಯಂತ ಲೋಕಸಭೆ ಚುನಾವಣೆಯು ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ.
ಲೋಕಸಭೆ ಚುನಾವಣೆ ಸಂಬಂಧ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದರು. ದೇಶದಲ್ಲಿ ಸುಮಾರು 97 ಕೋಟಿ ಮತದಾರರಿದ್ದಾರೆ. 49.7 ಕೋಟಿ ಪುರುಷ ಮತದಾರರು, 47.1 ಕೋಟಿ ಮಹಿಳಾ ಮತದಾರರು ಇದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ.
ಈ ಚುನಾವಣೆ ಪ್ರಕ್ರಿಯೆಯಲ್ಲಿ 1.5 ಕೋಟಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದರು.