Saturday, January 18, 2025
Homeಬೆಂಗಳೂರುರಾಜ್ಯದ ವಿವಿಧೆಡೆ 8 ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ವಿವಿಧೆಡೆ 8 ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬುಧವಾರ ಬೆಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು 8 ಅಧಿಕಾರಿಗಳ ವಿರುದ್ಧ ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆದಿದೆ. ಅಲ್ಲದೆ, ತೋಟದ ಮನೆಗಳ ಮೇಲೂ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು – ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ, ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ.ಉಮೇಶ್, ಬೀದರಿನ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ರವೀಂದ್ರ, ಬೆಳಗಾವಿ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು, ಬಳ್ಳಾರಿಯ – ಹಿಂದುಳಿದ ವರ್ಗಗಳ ಇಲಾಖೆಯ ಕಲ್ಯಾಣಾಧಿಕಾರಿ ಲೋಕೇಶ್, ರಾಯಚೂರು ಬೆಸ್ಕಾಂನ ಜೆಇ ಹುಲಿರಾಜ್ ಹಾಗೂ ಗದಗದ ಬೆಟಗೇರಿ ನಗರಸಭೆ ಎಂಜಿನಿಯರ್​​​​ ಹುಚ್ಚೇಶ್ ಬಂಡಿವಡ್ಡರ್‌ ಅವರ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆದಿದೆ.

RELATED ARTICLES
- Advertisment -
Google search engine

Most Popular