ಬೆಳ್ತಂಗಡಿ ತಾಲೂಕು ಕಚೇರಿಗೆ ದಿಢೀರ್ ಎಂಟ್ರಿ ಕೊಟ್ಟ ಲೋಕಾಯುಕ್ತ

0
72

ಬೆಳ್ತಂಗಡಿ : ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನೆಲೆಯಲ್ಲಿ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಆಗಸ್ಟ್‌ 13ರಂದು ಬೆಳಗ್ಗೆ 11.30ರ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಕಂದಾಯ ಇಲಾಖೆಗೆ ಭೇಟಿ ನೀಡಿ, ಕಚೇರಿಯಲ್ಲಿನ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಸಾರ್ವಜನಿಕರಿಂದ ಲಂಚ ಪಡೆಯಲಾಗುತ್ತಿದೆ ಎಂಬ ದೂರಿನ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಅವರ ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಏಳು ಮಂದಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಅಧಿಕಾರಿಗಳು ಕಚೇರಿಯ ವಿವಿಧ ದಾಖಲೆಗಳನ್ನು ಪರಿಶೀಲಿಸುವುದರ ಜೊತೆಗೆ, ಕಚೇರಿಗೆ ಆಗಮಿಸಿದ ಸಾರ್ವಜನಿಕರಿಂದಲೂ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ದಾಳಿಯ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ದಾಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here