ದಿಢೀರ್ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ ; ಹಲವು ಕಡತಗಳ ಪರಿಶೀಲನೆ

0
73

ಮೂಡುಬಿದಿರೆ: ಮೂಡುಬಿದಿರೆಯ ತಾಲೂಕು ಆಡಳಿತ ಸೌಧಕ್ಕೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿನ ಕೆಲವೊಂದು ಕಡತಗಳನ್ನು ಪರಿಶೀಲಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ದಿಢೀರ್ ಪರಿಶೀಲನೆಗೆ ಸಂಬಂಧಿಸಿದಂತೆ ಯಾವ ದೂರು ಅಥವಾ ಯಾವ ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

ಅದೇ ರೀತಿ, ಯಾವ ಸರ್ಕಾರಿ ಅಧಿಕಾರಿ ಅಥವಾ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿತ್ತು ಹಾಗೂ ಪರಿಶೀಲನೆಯ ನಿಖರ ಉದ್ದೇಶವೇನು ಎಂಬ ಬಗ್ಗೆಯೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಲೋಕಾಯುಕ್ತ ಅಧಿಕಾರಿಗಳ ಭೇಟಿ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಕೆಲಕಾಲ ಚರ್ಚೆ ನಡೆಯಿತು. ಪರಿಶೀಲನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಅಧಿಕಾರಿಗಳಿಂದ ಅಧಿಕೃತವಾಗಿ ಲಭ್ಯವಾದ ಬಳಿಕವಷ್ಟೇ ಸ್ಪಷ್ಟವಾಗುವ ನಿರೀಕ್ಷೆಯಿದೆ.