ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ವಾಷರ್ಿಕ ಕ್ರೀಡಾಕೂಟಕ್ಕೆ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಚಾಲನೆ ನೀಡಿದರು. ಎಂ.ದುಗಾದಾಸ್ ಶೆಟ್ಟಿ ಮಾವಮತೂರು ಮತ್ತಿತರರು ಇದ್ದಾರೆ. ಕೊಯಿಲ: ಸಕರ್ಾರಿ ಪ್ರೌಢಶಾಲೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ಬಂಟ್ವಾಳ: ಶಿಕ್ಷಣದ ಜೊತೆಗೆ ಕ್ರೀಡೆಗೆ ಆದ್ಯತೆ ನೀಡಿದಾಗ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ ಶೆಟ್ಟಿ ಸಿದ್ಧಕಟ್ಟೆ ಹೇಳಿದ್ದಾರೆ. ಇಲ್ಲಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಎಂ.ದುಗಾದಾಸ್ ಶೆಟ್ಟಿ ಮಾವಂತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಗುಣಮಟ್ಟದ ಶಿಕ್ಷಣದ ಮೂಲಕ ಖಾಸಗಿ ಶಾಲೆಯನ್ನು ಮೀರಿಸುವ ನಿಟ್ಟಿನಲ್ಲಿ ಬೆಳೆದಿದೆ’ ಎಂದರು.
ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಶಿಕ್ಷಕ ಕೆ.ರಮೇಶ ನಾಯಕ್ ರಾಯಿ, ಕ್ಲಬ್ಬಿನ ಉಪಾಧ್ಯಕ್ಷ ವಿಜಯ ಫೆನರ್ಾಂಡಿಸ್ ಶುಭ ಹಾರೈಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ರಾಜೇಶ ಜೈನ್ ಪಡ್ರಾಯಿ, ಮೋಹನ್ ಕೆ.ಶ್ರೀಯಾನ್ ರಾಯಿ, ಚಂದ್ರಶೇಖರ ಗೌಡ ಕಾರಂಬಡೆ, ಭೋಜ ಶೆಟ್ಟಿ ಹೋರಂಗಳ, ಲ್ಯಾನ್ಸಿ ಕುವೆಲ್ಲೊ ಕುದ್ಕೋಳಿ, ಸುರೇಶ ಪೂಜಾರಿ ರಾಯಿ, ಹಿರಿಯ ಶಿಕ್ಷಕಿ ಸೌಮ್ಯಾ ಮತ್ತಿತರರು ಇದ್ದರು. ಮುಖ್ಯಶಿಕ್ಷಕಿ ಸೌಜನ್ಯಾ ರಾವ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ದೈಹಿಕ ಶಿಕ್ಷಣ ನಿದರ್ೇಶಕ ಜನಾರ್ದನ ವಂದಿಸಿದರು. ಶಿಕ್ಷಕ ರಮೇಶ ಮಯ್ಯ ಕಾರ್ಯಕ್ರಮ ನಿರೂಪಿಸಿದರು.