ಕಾರವಾರ: ಲಾರಿ ಪಲ್ಟಿಯಾಗಿ ಇಬ್ಬರು ಬಿಹಾರ ಮೂಲದವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳಗಿನ ಜಾವ ಹೊನ್ನಾವರದ ಗೇರುಸೊಪ್ಪ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ.
ರಸ್ತೆ ತಿರುವಿನಲ್ಲಿ ಸುಳಿಮುರ್ಖಿ ಎಂಬಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ ಜಾತ್ರೆಯ ಆಟಿಕೆ ಸಾಮಾಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಅಪಘಾತವಾದ ಲಾರಿಯಲ್ಲಿ ಇನ್ನೂ ಮೂರು ಜನ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಹೊನ್ನಾವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೊನ್ನಾವರದ ಸುಳಿಮುರ್ಖಿ ಬಳಿ ಲಾರಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
RELATED ARTICLES