Monday, May 19, 2025
Homeಬಂಟ್ವಾಳವಿಟ್ಲದಲ್ಲಿ ಲಾರಿ ಚಾಲಕ ನೇಣುಬಿಗಿದು ಆತ್ಮಹತ್ಯೆ

ವಿಟ್ಲದಲ್ಲಿ ಲಾರಿ ಚಾಲಕ ನೇಣುಬಿಗಿದು ಆತ್ಮಹತ್ಯೆ

ವಿಟ್ಲ: ಲಾರಿ ಚಾಲಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲದ ಮುಳಿಯ ತಾಳಿಪಡ್ಪು ನಿವಾಸಿ ಲಾರಿ ಚಾಲಕ ಲಿಯೋ ಡಿಸೋಜ (45) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಲಿಯೋ ಅವರು ಅವಿವಾಹಿತರಾಗಿದ್ದು, ಅಣ್ಣನ ಜೊತೆ ವಾಸವಾಗಿದ್ದರು. ಊಟದ ಬಳಿಕ ಕೋಣೆಗೆ ತೆರಳಿದ್ದ ಲಿಯೋ ಅವರು ಬಾಗಿಲು ತೆರೆಯದ ಹಿನ್ನಲೆ ಒಳಗೆ ನೋಡಿದಾಗ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular