ಎಲ್‌ಪಿಜಿ ಸಿಲಿಂಡರ್ ಕೊರತೆ : ಹೋಟೆಲ್‌ಗಳು ಒಂದೊಂದಾಗಿ ಬಂದ್

0
20

ಉಡುಪಿ : ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಸ್ಥಗಿತಗೊಂಡಿರುವುದು ಜಿಲ್ಲೆಯಲ್ಲೂ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ನೀಡಿದ್ದು, ಉಡುಪಿ ನಗರ ವ್ಯಾಪ್ತಿಯಲ್ಲಿ ಹಲವು ಹೋಟೆಲ್‌ಗಳು ಬಾಗಿಲು ಮುಚ್ಚಿವೆ.

ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಬಹುತೇಕ ಹೋಟೆಲ್‌ಗಳು ಬಾಗಿಲು ಮುಚ್ಚಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಹೋಟೆಲ್‌ ಮಾಲಕರು ತಿಳಿಸಿದ್ದಾರೆ.

ಸಣ್ಣಸಣ್ಣ ಹೋಟೆಲ್, ಫಾಸ್ಟ್‌ ಫುಡ್‌ ಸೆಂಟರ್‌ ನಡೆಸುವವರ ಮೇಲೆ ಹೆಚ್ಚಿನ ಪರಿಣಾಮ ಬೀರಿದ್ದು, ಕೆಲವು ಫಾಸ್ಟ್‌ ಫುಡ್ ಸೆಂಟರ್‌ಗಳು ಈಗಾಗಲೇ ಬಾಗಿಲು ಮುಚ್ಚಿವೆ.

‘ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿರುವುದರಿಂದ ಹೋಟೆಲ್‌ ನಡೆಸುವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

LEAVE A REPLY

Please enter your comment!
Please enter your name here