
ಬೆಂಗಳೂರು : ತಿಂಗಳ ಆರಂಭದಲ್ಲೇ ವಾಣಿಜ್ಯ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಿದೆ. ಅ.1ರಿಂದ ಜಾರಿಗೆ ಬರುವಂತೆ 19 ಕೆ.ಜಿ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹62.50 ಹೆಚ್ಚಿಸಲಾಗಿದೆ.
ಹಬ್ಬದ ಸೀಸನ್ ಆರಂಭಕ್ಕೂ ಮುನ್ನ ವಾಣಿಜ್ಯ ಸಿಲಿಂಡರ್ ದರ ಏರಿಕೆಯಾಗಿರುವುದು ಹೋಟೆಲ್, ರೆಸ್ಟೋರೆಂಟ್, ಡಾಬಾ ಸೇರಿದಂತೆ ಆಹಾರ ವಲಯದ ವ್ಯವಹಾರಗಳ ಮೇಲೆ ಹೆಚ್ಚುವರಿ ವೆಚ್ಚದ ಹೊರೆ ಬೀಳುವ ಸಾಧ್ಯತೆ ಇದೆ.
ಅಡುಗೆ ಅನಿಲದ ದರ ಏರಿಕೆಯಿಂದ ಆಹಾರ ತಯಾರಿಕೆಯ ವೆಚ್ಚವೂ ಹೆಚ್ಚಾಗುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ಹೋಟೆಲ್ ಮತ್ತು ಊಟೋಪಚಾರದ ದರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.
ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ವಾಣಿಜ್ಯ ಎಲ್‌ಪಿಜಿ ಬಳಕೆದಾರರು ಹೆಚ್ಚುವರಿ ಹಣ ಪಾವತಿಸಬೇಕಾಗಿದೆ.
