ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಎಂ.ಎ ಸ್ನಾತಕೋತ್ತರ ಪದವಿಗೆ 2024-25 ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ಕನ್ನಡ ಐಚ್ಛಿಕದಲ್ಲಿ ಪದವಿ ಪಡೆದವರು ಅಥವಾ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಕನ್ನಡವನ್ನು ಭಾಷೆಯಾಗಿ ಕಲಿತು 60% ಅಂಕಗಳನ್ನು ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ವಯಸ್ಸಿನ ಮಿತಿ ಇರುವುದಿಲ್ಲ.
ಆಸಕ್ತ ಪದವೀಧರರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಕನ್ನಡ ಎಂ.ಎ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಕನ್ನಡ ಬಳಕೆ, ಸೃಜನಶೀಲ ಬರವಣಿಗೆ, ಪತ್ರಿಕಾ ಲೇಖನ ತಯಾರಿ, ಸಂಶೋಧನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6. ಮಾಹಿತಿಗಾಗಿ ವೆಬ್‌ಸೈಟ್ ವಿಳಾಸ http:// mangaloreuniversity.ac.in ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗೆ ಮೊ.ಸಂ. 9886165134, 97408 89627 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.