ಮಲ್ಪೆ : ಕಲ್ಮಾಡಿ ಬಗ್ಗುಮುಂಡ ಶ್ರೀ ನಾಗ ಸಪರಿವಾರ ಶ್ರೀ ಬಗ್ಗು ಪಂಜುರ್ಲಿ ದೈವಸ್ಥಾನದ 13ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ, ಶ್ರೀ ಬಗ್ಗು ಪಂಜುರ್ಲಿ ಮತ್ತು ಪರಿವಾರ ದೈವಗಳ ಕಾಲಾವಧಿ ಕೋಲವು ಮಾ. 28ರಿಂದ 30ರ ವರೆಗೆ ನಡೆಯಲಿದೆ.
ಆ ಪ್ರಯುಕ್ತ ಮಾ. 28ರಂದು ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ನವಕ ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಸಾಮೂಹಿಕ ಆಶ್ಲೇಷಾ ಬಲಿ, ಬಗ್ಗು ಪಂಜುರ್ಲಿ ದೈವದ ಸನ್ನಿಧಿಯಲ್ಲಿ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪನಿಯಾರ, ಮಧ್ಯಾಹ್ನ ಅನ್ನಸಂತರ್ಪಣೆ, ಮಾ. 29ರಂದು ಸಂಜೆ ದೈವದ ಭಂಡಾರ ಇಳಿದು, ಸಂಜೆ ಅನ್ನಸಂತರ್ಪಣೆ, ರಾತ್ರಿ ಬಗ್ಗುಪಂಜುರ್ಲಿ ಕೋಲ ನಡೆಯಲಿದೆ.
ಮಾ. 30ರಂದು ಸಂಜೆ 7.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕಯಶ್‌ಪಾಲ್‌ಎ ಸುವರ್ಣ ಅಧ್ಯಕ್ಷತೆ ವಹಿಸಲಿರುವರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ಕ್ಕೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ಥಳೀಯರಿಂದ ನೃತ್ಯ ಸಿಂಚನ, ಕಾಪು ರಂಗತರಂಗ ಕಲಾವಿದರಿಂದ ತುಳು ‘ಹಾಸ್ಯಮಯ ನಾಟಕ ನಡೆಯಲಿದೆ ಎಂದು ಆಡಳಿತ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.