ಮಂಗಳೂರು: ಮಹಾನಗರ ಪಾಲಿಕೆಯ ಕಮಿಷನರ್ ಆನಂದ್ ಸಿ.ಎಲ್. ವರ್ಗಾವಣೆ ಆದೇಶವನ್ನು ಸರ್ಕಾರ ರದ್ದುಗೊಳಿಸಿದೆ. ಆನಂದ್ 2023ರಂದು ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.
ಈ ನಡುವೆ ಹುದ್ದೆ ಗೊತ್ತುಪಡಿಸದೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು. ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್ ಅವರನ್ನು ಮಹಾನಗರ ಪಾಲಿಕೆಯ ಕಮಿಷನರ್ ಸ್ಥಾನಕ್ಕೆ ನಿಯೋಜನೆ ಮಾಡಿತ್ತು. ಆದರೆ ಅವಧಿಗೂ ಮುನ್ನವೇ ವರ್ಗಾವಣೆ ಆದೇಶ ಬಂದಿದೆ ಎನ್ನುವ ಕಾರಣಕ್ಕೆ ಆನಂದ್ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಆದೇಶ ರದ್ದುಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ವರ್ಗಾವಣೆ ರದ್ದು
RELATED ARTICLES