ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು ಅಜಿತ್ ಪವಾರ್ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ.
ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎಂದು ಶಂಕಿಸಲಾಗಿದ್ದು , ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದು, ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು.
ಇಂದು ಬೆಳಿಗ್ಗೆ ಸುಮಾರು 8:45ಕ್ಕೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ಚಾರ್ಟರ್ಡ್ ವಿಮಾನವು ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಿಲ್ಲಾ ಪಂಚಾಯತ್ ಚುನಾವಣೆ ನಿಮಿತ್ತ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ತೆರಳುತ್ತಿದ್ದರು. ವಿಮಾನವು ರನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂದ ಅವರು ಈ ಘಟನೆಯ ಬಗ್ಗೆ ತೀವು ಆಘಾತ ವ್ಯಕ್ತಪಡಿಸಿದ್ದು, ಹಿರಿಯ ಅಧಿಕಾರಿಗಳಿಂದ ನಿರಂತರ ಮಾಹಿತಿ ಪಡೆಯುತ್ತಿದ್ದಾರೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಅಪಘಾತದ ಬಗ್ಗೆ, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

