34ನೇ ಘಟಿಕೋತ್ಸವಕ್ಕೆ ಮಾಹೆ ಸಜ್ಜು : ನ19-22ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ಆಯೋಜನೆ

0
1

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹ) ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆ 34ನೇ ಘಟಿಕೋತ್ಸವದ ಸಂಭ್ರಮಕ್ಕೆ ಸಜ್ಜಾಗಿದ್ದು ಒಟ್ಟು 10,277 ವಿದ್ಯಾರ್ಥಿಗಳು ಈ ಘಟಿಕೋತ್ಸವದಲ್ಲಿ ಪದವಿ ಪ್ರಮಾಣಪತ್ರ ಸ್ವೀಕರಿಸಲಿದ್ದಾರೆ.

ನವೆಂಬರ್ 19ರಿಂದ 22ರವರೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, 7,694 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. ಹಾಗೆಯೇ, ಬೆಂಗಳೂರು ಕ್ಯಾಂಪಸ್‌ನಲ್ಲಿ ನವೆಂಬರ್ 28 ಮತ್ತು 29ರಂದು ನಡೆಯುವ ಸಮಾರಂಭದಲ್ಲಿ 2,583 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ.

ಅಲ್ಲದೆ, ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸಿರುವ 207 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ (ಪಿಎಚ್‌ಡಿ) ಪದವಿ ಪ್ರದಾನ ಮಾಡಲಾಗುವುದು ಎಂದು ಮಾಹೆಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕುಲಪತಿ ಡಾ.ಶರತ್ ರಾವ್ ಮಾಹಿತಿ ನಿಡಿದರು.

ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು, ಅವರ ಪೋಷಕರು, ಶೈಕ್ಷಣಿಕ ಮತ್ತು ಔದ್ಯಮಿಕ ಕ್ಷೇತ್ರದ ಗಣ್ಯರು ಹಾಗೂ ಬೋಧಕ ವರ್ಗವನ್ನು ಒಂದೆಡೆ ಸೇರಿಸುವ ಅರ್ಥಪೂರ್ಣ

ವೇದಿಕೆಯಾಗಿ ಈ ಸಮಾರಂಭ ರೂಪುಗೊಳ್ಳಲಿದೆ. ಈ ಘಟಿಕೋತ್ಸವ ಸಮಾರಂಭವನ್ನು ಪದವೀಧರರ ಶೈಕ್ಷಣಿಕ ಪಯಣದ ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ.

ಈ ಬಾರಿಯ ಘಟಿಕೋತ್ಸವದಲ್ಲಿ ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶ್ವದಾದ್ಯಂತ ಹೆಸರು ಮಾಡಿರುವ ಪ್ರಮುಖರು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ್ ಎಂದರು.

ಮಾಹೆಯ ಸಹಾಕುಲಾಧಿಪತಿ ಡಾ.ಎಚ್.ಎಸ್ ಬಳ್ಳಾಲ್, ಡಾ.ಗಿರಿಧರ್ ಕಿಣಿ, ಮೇಜರ್ ಜನರಲ್ ಡಾ. ಮ್ಯಾಥ್ಯೂ ಜಾಕೋಬ್, ಡಾ. ಆನಂದ ವೇಣುಗೋಪಾಲ್, ಡಾ ಸಂದೀಪ್ ಶೆಣೈ ಈ ಸಂದರ್ಬದಲ್ಲಿ ಉಪಸ್ಥಿತರಿದ್ದರು