ಮಹೇಶ್‌ ತಿಮರೋಡಿಗೆ ನ್ಯಾಯಾಂಗ ಬಂಧನ

0
257


ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬೆಳ್ತಂಗಡಿ ಮನೆಯಿಂದ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ಸಾಯಂಕಾಲ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಬ್ರಹ್ಮಾವರ ತಾಲೂಕು ಸಂಚಾರಿ ಪೀಠದಲ್ಲಿ ವಿಚಾರಣೆ ನಡೆದಿದ್ದು , ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕುರಿತು ಬಿಜೆಪಿ ಗ್ರಾಮಾಂತರ ಅಧ್ಯಕ್ಷರು ಪೊಲೀಸರಿಗೆ ದೂರು ನೀಡಿದ್ದರು.
ಈ ಬಗ್ಗೆ ಎರಡು ಬಾರಿ ನೋಟಿಸ್‌ ನೀಡಿದರೂ ಉತ್ತರಿಸಿದ ಕಾರಣ ಗುರುವಾರ ಮಹೇಶ್‌ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬ್ರಹ್ಮಾವರ ಠಾಣೆಗೆ ಕರೆತಂದಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಸಾಯಂಕಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಬಳಿಕ ಪೊಲೀಸರು ತಿಮರೋಡಿಯವರನ್ನು ಬಿಗಿ ಭದ್ರತೆಯಲ್ಲಿ ಹಿರಿಯಡಕ ಜೈಲಿಗೆ ಕರೆದೊಯ್ಯಲಾಯಿತು. 23ರಂದು ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ.

LEAVE A REPLY

Please enter your comment!
Please enter your name here