ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೊಟ್ಟಮೊದಲ ಮಹಿಳಾ ಅಧ್ಯಕ್ಷರಾಗಿ ಮಹೇಶ್ವರಿ ಆಯ್ಕೆ

0
19

ಮೂಡುಬಿದಿರೆ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಮೊಟ್ಟಮೊದಲ ಮಹಿಳಾ ಅಧ್ಯಕ್ಷರಾಗಿ ಮಹೇಶ್ವರಿ ಅವರು ಆಯ್ಕೆಯಾಗಿರುತ್ತಾರೆ.

ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಹೇಶ್ವರಿ ಅವರು ಕಳೆದ 20 ವರ್ಷಗಳಿಂದ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಪ್ರಸ್ತುತ ಸರಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮೂಡುಬಿದಿರೆ ಮೈನ್ ಇಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಾಂಟ್ರಾಡಿ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅರ್ಚನಾ ಜೈನ್ ಅವರು ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಚುನಾವಣಾ ಅಧಿಕಾರಿಯಾಗಿರುವ ಪ್ರಫುಲ್ಲ ಶೆಟ್ಟಿ ಅವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here