ಮುಲ್ಕಿ:ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು ಸಭೆಯನ್ನು ಗ್ರಾಮ ಪಂಚಾಯತದ ಅಧ್ಯಕ್ಷೆ ಕುಸುಮ ಚಂದ್ರಶೇಖರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ: ಮುಲ್ಕಿ ಪೋಲಿಸ್ ಠಾಣೆಯ ಉಪನಿರೀಕ್ಷಕರಾದ ಅನಿತಾ ಬಿ ಹೆಚ್ ಮಹಿಳೆಯ ಸಬಲೀಕರಣದ ಬಗ್ಗೆ ಮಾಹಿತಿ ನೀಡಿ ಆಧುನಿಕ ಯುಗದಲ್ಲಿ ಎಲ್ಲಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ
ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿದ್ದು ಎದುರಿಸುವ ಶಕ್ತಿ ಮೈಗೂಡಿಸಿಕೊಳ್ಳಬೇಕಾಗಿದೆ ಮಹಿಳೆಯರು ಸಾಮಾಜಿಕ ಜಾಲತಾಣದಲ್ಲಿ ಜಾಗೃತರಾಗಿ ಸೈಬರ್ ಕ್ರೈಂ ಅಪರಾಧಗಳನ್ನು ತಡೆಗಟ್ಟಬೇಕಾಗಿದೆ ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿದ್ದು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು.
ಪಂಚಾಯತ್ ಉಪಾಧ್ಯಕ್ಷ ಹೇಮನಾಥ ಅಮೀನ್, ಸದಸ್ಯ ಉಮೇಶ್ ಪೂಜಾರಿ,ಕಾರ್ಯದರ್ಶಿ ಸುಜಾತ, ಆರೋಗ್ಯ ಶಿಕ್ಷಣಾಧಿಕಾರಿ ಜಯಂತಿ. ಮುರಳೀಧರ ಎ ಎಸ್.ಟಿ.ಎಸ್, ಸಮುದಾಯ ಆರೋಗ್ಯ ಅಧಿಕಾರಿ ಕೋಮಲ, ಪಂಚಾಯತ್ ಸಿಬ್ಬಂದಿ ವರ್ಗ. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಂಡಿದ್ದರು