ಮಹಿಳಾ ಮೀಸಲಾತಿ ವಿಚಾರವಾಗಿ ಮಹಿಳಾ ಮೋರ್ಚಾದಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

0
21

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ಮಹಿಳಾ ಮೀಸಲಾತಿಯಂತಹ ಐತಿಹಾಸಿಕ ಕಾಯ್ದೆ ಜಾರಿಗೆ ಬರದಂತೆ ತಡೆ ಹಿಡಿದು ನಾರಿ ಶಕ್ತಿಯ ಏಳಿಗೆಯನ್ನು ಸಹಿಸದ ಕಾಂಗ್ರೆಸ್ ಸರಕಾರದ ಧೋರಣೆಯನ್ನು ಖಂಡಿಸಿ ಮಹಿಳಾ ಮೋರ್ಚಾ ಉತ್ತರಮಂಡಲ ವತಿಯಿಂದ ಸುರತ್ಕಲ್ ಜಂಕ್ಷನ್ ನಲ್ಲಿ ಪ್ರತಿಭಟನೆಯನ್ನು
ಹಮ್ಮಿ ಕೊಳ್ಳಲಾಗಿತ್ತು.

ಈ ಪ್ರತಿಭಟನ ಸಭೆಗೆ ಜಿಲ್ಲಾ ಉಪಾಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಪೂಜಾ ಪೈ, ರಾಜ್ಯ ಮಹಿಳಾ ಮೋರ್ಚ ಕಾರ್ಯದರ್ಶಿ ಶ್ವೇತಾ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಡಾ .ಮಂಜುಳಾ ಅನಿಲ್ ರಾವ್, ಉಪಾಧ್ಯಕ್ಷರು ವಜ್ರಕ್ಷಿ ಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ರಾಜ್ ಕೃಷ್ಣಾಪುರ, ಮಂಡಲಮಹಿಳಾ ಮೋರ್ಚಾದ ಅಧ್ಯಕ್ಷರಾದ ಲಕ್ಷ್ಮಿ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳಾದ ಪವಿತ್ರ ನಿರಂಜನ್, ಸಪ್ನಾ ಸುನಿಲ್, ಮಂಡಲ ಪದಾಧಿಕಾರಿಗಳು ಮಂಡಲ ಮೋರ್ಚಾದ ಪದಾಧಿಕಾರಿಗಳು, ಮಹಾನಗರ ಪಾಲಿಕೆ ನಿಕಟಪೂರ್ವ ಸದಸ್ಯರುಗಳು ,ಮಹಾಶಕ್ತಿ ಕೇಂದ್ರ ಅಧ್ಯಕ್ಷರುಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here