ವಿಶ್ವ ಬಾಯಿ ಆರೋಗ್ಯ ದಿನ ಇದರ ಅಂಗವಾಗಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ(ರಿ) ಮಂಗಳೂರು ಇದರ ವತಿಯಿಂದ ದ ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನಾರ್ಲ ಪಡೀಲ್ ತಲಪಾಡಿ ಇಲ್ಲಿ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು.
ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಡಾ| ಮುರಲೀ ಮೋಹನ ಚೂಂತಾರು ಇವರು ಮಕ್ಕಳಿಗೆ ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಟೂತ್‍ಬ್ರಷ್, ಟೂತ್ ಪೇಸ್ಟಗಳ ಬಗ್ಗೆ ಮಾಹಿತಿ ನೀಡಿ, ಮಕ್ಕಳು ಹೇಗೆ ಮತ್ತು ಯಾವ ರೀತಿ ಹಲ್ಲು ಉಜ್ಜಬೇಕು ಎಂಬುದರ ಬಗ್ಗೆ ಉಪದೇಶ ನೀಡಿದರು.
ಆಹಾರ ಮತ್ತು ಹಲ್ಲಿನ ಆರೋಗ್ಯದ ಬಗ್ಗೆ ವಿಶೇಷ ಮಾಹಿತಿ ನೀಡಿದರು ಸುಂದರ, ಸುದೃಡ ಆರೋಗ್ಯವಂತ ಹಲ್ಲುಗಳು ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಬಾಯಿಯೇ ನಮ್ಮ ಆರೋಗ್ಯದ ಹೆಬ್ಬಾಗಿಲು ಮತ್ತು ಬಾಯಿಯ ಆರೋಗ್ಯ ದ ನಿರ್ಲಕ್ಷ ಸಲ್ಲದು ಎಂದು ನುಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಇಂದಿರಾ,ಸಹ ಶಿಕ್ಷಕಿ ರೇಖಾ ಉಪಸ್ಥಿತರಿದ್ದರು. ಸುಮಾರು 35 ಮಕ್ಕಳಿಗೆ ಟೂತ್ ಪೇಸ್ಟ್, ಟೂತ್ ಬ್ರಷ್, ಲೇಖನ ಸಾಮಗ್ರಿ ಮತ್ತು ದಂತ ಆರೋಗ್ಯ ಮಾಹಿತಿ ಕರಪತ್ರ ಹಂಚಲಾಯಿತು.

