ದೆಹಲಿಯ ಮೆಟ್ರೋ ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ

0
66

ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದ ರಿಥಾಲಾ ಮೆಟ್ರೋ ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಗುಡಿಸಲುಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಸುಮಾರು 400 ರಿಂದ 500 ಗುಡಿಸಲುಗಳು ಬೆಂಕಿಯಲ್ಲಿ ಸಂಪೂರ್ಣವಾಗಿ ಸುಟ್ಟುಹೋಗಿವೆ. ಕೆಲವು ಪ್ರದೇಶಗಳಲ್ಲಿ ಸಂಗ್ರಹವಾಗಿರುವ ಪ್ಲಾಸ್ಟಿಕ್ ತ್ಯಾಜ್ಯದ ರಾಶಿಗಳು ಬೆಂಕಿಯನ್ನು ಮತ್ತಷ್ಟು ಹೆಚ್ಚಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್​ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದಿಬಂದಿದೆ.

LEAVE A REPLY

Please enter your comment!
Please enter your name here