ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಬೇಟೆ

0
12

ಡ್ರಗ್ಸ್ ಫ್ರೀ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂ ಡಿ ಎಂ ಎ ಮಾದಕ ವಸ್ತು ಖರೀದಿಸಿ ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿ ಅವರಿಂದ ಐದು ಕೆಜಿ 196 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿರುತ್ತಾರೆ.

ಮಂಗಳೂರು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಾಯಿ ಗಡ್ಡೆ ವಾಟರ್ ಟ್ಯಾಂಕ್ ಬಳಿಯ ಅಣ್ಣಪ್ಪ ಸ್ವಾಮಿ ಮನು ಎಂಬಾತನಿಂದ ಒಂದುವರೆ ಲಕ್ಷ ರೂ ಮೌಲ್ಯದ 15.17 ಗ್ರಾಂ ಎಂ ಡಿ ಎಂ ಎ ಮಾದಕ ವಸ್ತುವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾಗ ಪೂರೈಕೆದಾರ ಡ್ರಗ್ಸ್ ಪೆಡಾರ್ಗಳ ಬಗ್ಗೆ ಮಾಹಿತಿ ಲಭ್ಯವಾಗಿರುತ್ತದೆ. ಲಭ್ಯ ಮಾಹಿತಿಯ ಪ್ರಕಾರ ಜುಲೈ 15ರಂದು ಬಾಗಲಕೋಟೆಯ ಹುನಗುಂದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಮೇಲೆ ದಾಳಿ ನಡೆಸಿ ಆರೋಪಿಗಳಾದ ಬೆಳ್ತಂಗಡಿ ಹಿಂಡಬೆಟ್ಟು ಗ್ರಾಮದ ಅಮಿಷ ಮಂಜಿಲ್ ನ ಮಹಮ್ಮದ್ ಅಲ್ಫಾಜ್ 28 ವರ್ಷ ಹಾಗೂ ಉಜಿರೆ ಹಳೆಪೇಟೆ ಲಾಯಿಲಾ ಗ್ರಾಮದ ವಿವೇಕಾನಂದ ನಗರದ ಮೊಹಮ್ಮದ್ ಮುಸ್ತಫಾ 28 ವರ್ಷ ರನ್ನು ಪತ್ತೆ ಹಚ್ಚಿ ಅವರಿಂದ ಒಟ್ಟು ಐದು ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂ ಡಿ ಎಂ ಎ ಬ್ಯಾಗ್, ಮೊಬೈಲ್ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಎಸ್.ಪಿ. ಅರುಣ್ ಕೆ. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ವರದಿ ರಾಯಿ ರಾಜ ಕುಮಾರ್