ನವದೆಹಲಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮಹತ್ವದ ಬದಲಾವಣೆ ತರಲು ಸರ್ಕಾರ ಮುಂದಾಗಿದೆ. ಯೋಜನೆಯಡಿ ಪ್ರಸ್ತುತ ರಾಜ್ಯದ ಸುಮಾರು 1.30 ಕೋಟಿಗೂ ಅಧಿಕ ಮಹಿಳೆಯರು ಪ್ರತಿ ತಿಂಗಳು ₹2,000 ಆರ್ಥಿಕ ನೆರವು ಪಡೆಯುತ್ತಿದ್ದು, ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಸಿದ್ಧತೆ ನಡೆಸಿದೆ.
ಇತ್ತೀಚಿನ ದಿನಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿ ಕೆಲವು ಲೋಪದೋಷಗಳು ಹಾಗೂ ಅನರ್ಹರಿಗೆ ಹಣ ಜಮೆಯಾಗುತ್ತಿರುವ ಕುರಿತು ಸರ್ಕಾರದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ, ಫಲಾನುಭವಿಗಳ ಗುರುತಿನ ದೃಢೀಕರಣಕ್ಕಾಗಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದೆ.
ಈ ಕುರಿತು ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ D. K. Shivakumar, ಕೆಲವರು ಸಾವನ್ನಪ್ಪಿದ್ದರೂ ಅವರ ಹೆಸರಿನಲ್ಲಿ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಗುರುತಿನ ಮರುಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
“ಯಾರಿಗೆ ಯೋಜನೆಯ ಲಾಭ ಸಿಗಬೇಕೋ ಅವರಿಗೆ ಮಾತ್ರ ಸಿಗಬೇಕು. ಅದಕ್ಕಾಗಿ ಹೊಸದಾಗಿ ಗುರುತಿನ ಪರಿಶೀಲನೆ ನಡೆಸುವ ಪ್ರಕ್ರಿಯೆ ಬಗ್ಗೆ ಚರ್ಚೆ ನಡೆಯುತ್ತಿದೆ” ಎಂದು ಅವರು ಸ್ಪಷ್ಟಪಡಿಸಿದರು.
ಸರ್ಕಾರದ ಈ ಕ್ರಮದಿಂದ ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚುವ ನಿರೀಕ್ಷೆಯಿದ್ದು, ಅನರ್ಹ ಫಲಾನುಭವಿಗಳಿಗೆ ಕಡಿವಾಣ ಹಾಕಿ ಅರ್ಹ ಮಹಿಳೆಯರಿಗೆ ಮಾತ್ರ ನೆರವು ತಲುಪಿಸುವ ಉದ್ದೇಶ ಹೊಂದಲಾಗಿದೆ. ಬಯೋಮೆಟ್ರಿಕ್ ವ್ಯವಸ್ಥೆ ಜಾರಿಯಾದರೆ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಇದು ಮಹತ್ವದ ಬದಲಾವಣೆಯಾಗಲಿ

