Saturday, April 26, 2025
Homeಕಾರ್ಕಳಮಾಳ: ವನಮಹೋತ್ಸವ ಆಚರಣೆ

ಮಾಳ: ವನಮಹೋತ್ಸವ ಆಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಶಾಲೆಯಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಾದ ಶ್ರೀಧರ್ ಗೌಡ ಇವರು ಗಿಡವನ್ನು ನೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಎಲ್ಲಾ ವಿದ್ಯಾರ್ಥಿಗಳಿಗೂ ಮನೆಗೊಂದು ಗಿಡದಂತೆ ಅರಣ್ಯ ಇಲಾಖೆಯಿಂದ ವಿತರಿಸಲಾಯಿತು. ಗಿಡವನ್ನು ನೆಟ್ಟು ಪೋಷಣೆ ಮಾಡಿ ಸಂರಕ್ಷಿಸುವ ಬಗ್ಗೆ ಅಧಿಕಾರಿಗಳು ಮಾಹಿತಿಯನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ರಘುಪತಿ ಕಾಮತ್ ಪೋಷಕರಾದ ದಿನೇಶ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು ಎಲ್ಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಸಂತೋಷದಿಂದ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular