ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ : ಶಾಸಕ ಹರೀಶ್ ಪೂಂಜ

0
23

ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.

ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.

ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಹರೀಶ್ ಪೂಂಜ ಅವರು, “ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಈ ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ತಿಳಿಸಿದ್ದಾರೆ.

ಇದೇ ವೇಳೆ ಕಾಮಗಾರಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಅವರು ವಿನಂತಿಸಿದರು

LEAVE A REPLY

Please enter your comment!
Please enter your name here